ತಿದ್ದಿಕೊಳ್ಳಲು ಈಶ್ವರಪ್ಪಗೆ ಸಾಕಷ್ಟು ಸಮಯಾವಕಾಶ ನೀಡಲಾಗಿತ್ತು, ಅವರು ಹಠ ಬಿಡಲಿಲ್ಲ: ಬಿವೈ ವಿಜಯೇಂದ್ರ
ಎಲ್ಲ ರಾಜ್ಯಗಳ ಬಿಜೆಪಿ ಘಟಕಗಳಲ್ಲಂತೆ ರಾಜ್ಯ ಬಿಜೆಪಿ ಘಟಕದಲ್ಲೂ ಒಂದು ಶಿಸ್ತು ಸಮಿತಿ ಇದೆ. ತಮ್ಮಿಂದಾಗಿತ್ತಿರುವ ಪ್ರಮಾದಗಳನ್ನು ತಿದ್ದಿಕೊಳ್ಳಲು ಈಶ್ವರಪ್ಪನವರಿಗೆ ಸಾಕಷ್ಟು ಸಮಯಾವಕಾಶ ನೀಡಲಾಗಿತ್ತು. ಆದರೆ ಅವರು ತಮ್ಮ ಧೋರಣೆಗಳನ್ನು ಬದಲಿಸಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು.
ಶಿವಮೊಗ್ಗ: ಕರ್ನಾಟಕ ಬಿಜೆಪಿ ಘಟಕದ ಶಿಸ್ತು ಸಮಿತಿಯು ರಾಜ್ಯ ನಾಯಕತ್ವದ ವಿರುದ್ಧ ಬಂಡಾಯವೆದ್ದಿರುವ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆಎಸ್ ಈಶ್ವರಪ್ಪರನ್ನು (KS Eshwarappa) ಕೊನೆಗೂ ಪಕ್ಷದಿಂದ ಉಚ್ಚಾಟಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಿಎಸ್ ಯಡಿಯೂರಪ್ಪ (BS Yediyurappa), ಅದು ಪಕ್ಷದ ಶಿಸ್ತು ಸಮಿತಿಯ ನಿರ್ಧಾರ ಮತ್ತು ಪ್ರಾಯಶಃ ಈಶ್ವರಪ್ಪನವರ ಅಪೇಕ್ಷೆಯೂ ಅದೇ ಆಗಿತ್ತು ಅನಿಸುತ್ತೆ, ತಾನು ಪ್ರತಿಕ್ರಿಯೆ ನೀಡಲ್ಲ ಎಂದು ಹೇಳಿದರು. ಅವರ ನಂತರ ಮಾತಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra), ಎಲ್ಲ ರಾಜ್ಯಗಳ ಬಿಜೆಪಿ ಘಟಕಗಳಲ್ಲಂತೆ ರಾಜ್ಯ ಬಿಜೆಪಿ ಘಟಕದಲ್ಲೂ ಒಂದು ಶಿಸ್ತು ಸಮಿತಿ ಇದೆ. ತಮ್ಮಿಂದಾಗಿತ್ತಿರುವ ಪ್ರಮಾದಗಳನ್ನು ತಿದ್ದಿಕೊಳ್ಳಲು ಈಶ್ವರಪ್ಪನವರಿಗೆ ಸಾಕಷ್ಟು ಸಮಯಾವಕಾಶ ನೀಡಲಾಗಿತ್ತು. ಆದರೆ ಅವರು ತಮ್ಮ ಧೋರಣೆಗಳನ್ನು ಬದಲಿಸಲಿಲ್ಲ ಎಂದು ಹೇಳಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಬಗ್ಗೆ ಭವಿಷ್ಯವಾಣಿ ನುಡಿದ ಯಡಿಯೂರಪ್ಪ, ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಕನಿಷ್ಟ ಮೂರು ಲಕ್ಷ ವೋಟುಗಳಿಂದ ಗೆಲುವು ಸಾಧಿಸಲಿದ್ದಾರೆ ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಶಿವಕುಮಾರ್ ಒಬ್ಬ ತಲೆತಿರುಕ, ಕ್ಷುಲ್ಲಕ ಕಾರಣಗಳಿಂದ ಮುಸ್ಲಿಮರ ಮನವೊಲಿಸುವ ಪ್ರಯತ್ನ ಮಾಡುತ್ತಾನೆ: ಬಿಎಸ್ ಯಡಿಯೂರಪ್ಪ
Published on: Apr 23, 2024 11:21 AM
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
