ಅಸೆಂಬ್ಲಿ ಉಪ ಚುನಾವಣೆ: ಕುಮಾರಸ್ವಾಮಿ ಒಳಗೊಂಡ ವರಿಷ್ಠರಿಂದ ಅಭ್ಯರ್ಥಿಗಳ ಆಯ್ಕೆ: ಅರ್ ಆಶೋಕ

ಅರುಣ್​ ಕುಮಾರ್​ ಬೆಳ್ಳಿ

Updated on: Aug 30, 2024 | 5:03 PM

ಬಿಜೆಪಿ ಮತ್ತು ಜೆಡಿಎಸ್ ನಾಯಕರು ಒಮ್ಮತದ ಅಭ್ಯರ್ಥಿಗಳ ಬಗ್ಗೆ ಮಾತಾಡುತ್ತಿರುವರಾದರೂ, ಚನ್ನಪಟ್ಟಣ ಕ್ಷೇತ್ರ ದೊಡ್ಡ ಕಗ್ಗಂಟಾಗಿ ಪರಿಣಮಿಸಿದೆ. ಸಿಪಿ ಯೋಗೇಶ್ವರ್ ಮತ್ತು ಕುಮಾರಸ್ವಾಮಿ ನಡುವೆ ಪ್ರತಿಷ್ಠೆಯ ಸವಾಲು ಎದುರಾಗಿದೆ. ಕುಮಾರಸ್ವಾಮಿಗೆ ತಮ್ಮ ಮಗನನ್ನು ಚನ್ನಪಟ್ಟಣದಿಂದ ರೀ-ಲಾಂಚ್ ಮಾಡುವ ಬಯಕೆ ಇದೆ.

ದೆಹಲಿ: ರಾಜ್ಯದ ಕೆಲವು ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ಇಂದು ಪಕ್ಷದ ವರಿಷ್ಠರೊಂದಿಗೆ ಮಾತುಕತೆ ನಡೆಸಿದ ಬಳಿಕ ಮಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅರ್ ಅಶೋಕ, ಉಪ ಚುನಾವಣೆ ನಡೆಯುವ ಕ್ಷೇತ್ರಗಳಿಗೆ ಬಿಜೆಪಿ ಅಥವಾ ಜೆಡಿಎಸ್ ಅಭ್ಯರ್ಥಿ ಅಂತಲ್ಲ, ಎಲ್ಲ ಕಡೆ ಎನ್​ಡಿಎ ಅಭ್ಯರ್ಥಿಗಳು ಸ್ಪರ್ಧಿಸುತ್ತಾರೆ, ಅಭ್ಯರ್ಥಿಗಳ ಆಯ್ಕೆಯನ್ನು ವರಿಷ್ಠರು ಮಾಡುತ್ತಾರೆ, ವರಿಷ್ಠರಲ್ಲಿ ಹೆಚ್ ಡಿ ಕುಮಾರಸ್ವಾಮಿ ಸಹ ಸೇರಿದ್ದಾರೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಚನ್ನಪಟ್ಟಣ ಉಪ ಚುನಾವಣೆ ಟಿಕೆಟ್ ವಿಚಾರ: ಒಟ್ಟಿಗೆ ಹೋದ್ರೆ ಇಬ್ಬರಿಗೂ ಲಾಭವೆಂದ ಆರ್​ ಅಶೋಕ್

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.