Assembly Polls: ಚಾಮುಂಡೇಶ್ವರಿಯಿಂದಲೇ ಸ್ಪರ್ಧಿಸಲು ಕ್ಷೇತ್ರದ ಕಾರ್ಯಕರ್ತರಿಂದ ಸಿದ್ದರಾಮಯ್ಯ ಮೇಲೆ ಒತ್ತಡ

ಅರುಣ್​ ಕುಮಾರ್​ ಬೆಳ್ಳಿ

Updated on: Feb 02, 2023 | 11:55 AM

ಅವರಿಗೆ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವುದು ಬೇಕಿಲ್ಲ, ಚಾಮುಂಡೇಶ್ವರಿಯಿಂದಲೇ ಸ್ಪರ್ಧಿಸಿ ಅಂತ ಆಗ್ರಹಿಸಲು ಬೆಂಗಳೂರಲ್ಲಿರುವ ಅವರ ಅಧಿಕೃತ ನಿವಾಸಕ್ಕೆ ಆಗಮಿಸಿದ್ದಾರೆ.

ಬೆಂಗಳೂರು:  ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ (assembly polls) ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂದು ಸಿದ್ದರಾಮಯ್ಯ (Siddaramaiah) ಒಂದು ನಿರ್ಧಾರಕ್ಕೆ ಬರುತ್ತಿದ್ದಂತೆಯೇ, ಬೇರೆ ಕೆಲ ಕ್ಷೇತ್ರಗಳ ಕಾರ್ಯಕರ್ತರರು ನಮ್ಮಲ್ಲಿಗೆ ಬನ್ನಿ ಅಂತ ಅವರ ಮೇಲೆ ಒತ್ತಡ ಹೇರಲಾರಂಭಿಸಿದ್ದಾರೆ. ಈ ವಿಡಿಯೋದಲ್ಲಿ ಕಾಣಿತ್ತಿರುವವರು ಸಿದ್ದರಾಮಯ್ಯ ಹಿಂದೆ 8 ಬಾರಿ ಸ್ಪರ್ಧಿಸಿರುವ ಚಾಮುಂಡೇಶ್ವರಿ (Chamundeshwari) ಕ್ಷೇತ್ರದ ಕಾರ್ಯಕರ್ತರು. ಅವರಿಗೆ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವುದು ಬೇಕಿಲ್ಲ, ಚಾಮುಂಡೇಶ್ವರಿಯಿಂದಲೇ ಸ್ಪರ್ಧಿಸಿ ಅಂತ ಆಗ್ರಹಿಸಲು ಬೆಂಗಳೂರಲ್ಲಿರುವ ಅವರ ಅಧಿಕೃತ ನಿವಾಸಕ್ಕೆ ಆಗಮಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published on: Feb 02, 2023 11:53 AM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.