ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ

Edited By:

Updated on: Nov 14, 2024 | 6:27 PM

ಸರ್ಕಾರಿ ಬಸ್ ಕಂಡಕ್ಟರ್ ಹಾಗೂ ಪ್ರಯಾಣಿಕರ ನಡುವೆ ಒಂದಲ್ಲ ಒಂದು ಕಾರಣಕ್ಕೆ ಜಗಳ, ಗಲಾಟೆಗಳು ನಡೆಯುತ್ತಲೇ ಇವೆ. ಅದರಂತೆ ಗದಗನಲ್ಲಿ ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನಡೆದಿದೆ.

ಗದಗ, (ನವೆಂಬರ್ 14): ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಹರಿಪೂರ ತಾಂಡಾದಲ್ಲಿ ನಡೆದಿದೆ. ಟಿಕೆಟ್​ ವಿಚಾರವಾಗಿ ಕಂಡಕ್ಟರ್​ ಮತ್ತು ಪ್ರಯಾಣಿಕನ ನಡುವೆ ಮಾತಿನ ಚಕಮಕಿಯಾಗಿದ್ದು, ಅದು ಬಡಿದಾಟಕ್ಕೆ ತಿರುಗಿದೆ. ಬಸ್ ಬಾಗಿಲಿನಲ್ಲಿ ನಿಂತ ಕಂಡಕ್ಟರ್ ಕೃಷ್ಣಾ ನಾಯಕನನ್ನು ಎಳೆದೊಯ್ದು ಹಲ್ಲೆ ಮಾಡಲಾಗಿದೆ. ಬಳಿ ಮಹಿಳೆಯೊಬ್ಬರು ಮಧ್ಯಪ್ರವೇಶಿಸಿ ಕಂಡಕ್ಟರ್​ನನ್ನು ರಕ್ಷಣೆ ಮಾಡಿದ್ದಾರೆ.

Published on: Nov 14, 2024 06:26 PM
Loading...
Unable to load recommendations.
Follow Us
ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More