ಚಲುಸುತ್ತಿರುವಾಗ್ಲೇ ಕಳಚಿದ ಬಸ್​ ಟೈರ್, ಅಬ್ಬಾ..ಬದುಕಿದೆವು ಎಂದು ನಿಟ್ಟುಸಿರು ಬಿಟ್ಟ ಪ್ರಯಾಣಿಕರು: ವಿಡಿಯೋ ವೈರಲ್

Edited By:

Updated on: Aug 20, 2023 | 5:44 PM

ಗದಗದಿಂದ ನರಗುಂದದ ಕಡೆ ಹೊರಟಿದ್ದ ವಾಯವ್ಯ ಕರ್ನಾಟಕ ಸಾರಿಗೆ ನಿಮಗದ ಬಸ್​ ಚಲಿಸುತ್ತಿರುವಾಗಲೇ ಚಕ್ರ ಕಟ್​ ಆಗಿದೆ. ಈ ಬಸ್​​ನಲ್ಲಿ ಕಾಲೇಜ್ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 50 ಪ್ರಯಾಣಿಕರಿದ್ದರು. ಅದೃಷ್ಟವಶಾತ್​ ಯಾವುದೇ ಅನಾಹುತ ಸಂಭವಿಸಿಲ್ಲ.

ಗದಗ, (ಆಗಸ್ಟ್ 20): ಚಲಿಸುತ್ತಿರುವಾಗಲೇ ಏಕಾಏಕಿ ಬಸ್​ನ ಚಕ್ರ ಕಟ್​ ಆಗಿ ಬಿದ್ದಿದ್ದು, ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ. ಗದಗದಿಂದ ನರಗುಂದದ ಕಡೆ ಹೊರಟಿದ್ದ ವಾಯವ್ಯ ಕರ್ನಾಟಕ ಸಾರಿಗೆ ನಿಮಗದ ಬಸ್​ ಚಲಿಸುತ್ತಿರುವಾಗಲೇ ಚಕ್ರ ಕಟ್​ ಆಗಿದೆ. ಈ ಬಸ್​​ನಲ್ಲಿ ಕಾಲೇಜ್ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 50 ಪ್ರಯಾಣಿಕರಿದ್ದರು. ಅದೃಷ್ಟವಶಾತ್​ ಯಾವುದೇ ಅನಾಹುತ ಸಂಭವಿಸಿಲ್ಲ. ಹಿಂಬದಿಯ ಡಬಲ್ ಚಕ್ರದ ಪೈಕಿ ಒಂದು ಚಕ್ರ ದಿಢೀರ್ ಬಿಚ್ಚಿಬಿದ್ದು ರಸ್ತೆಯ ಪಕ್ಕದಲ್ಲಿ ಬಿದ್ದಿದ್ದದೆ. ಚಕ್ರ ಬಿಚ್ಚಿ ಉರುಳಿ ಹೋಗ್ತಿದ್ದಂತೆ ಚಾಲಕ ಕೂಡಲೇ ಬಸ್​ ನಿಲ್ಲಿಸಿದ್ದಾನೆ. ಬಳಿಕ ಪ್ರಯಾಣಿಕರು ಅಬ್ಬಾ ಬದುಕಿದೆವು ಅಂತ ನಿಟ್ಟುಸಿರು ಬಿಟ್ಟಿದ್ದಾರೆ. ಬಸ್ ನ ಹಿಂದೆ ಹೋಗ್ತಿದ್ದ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ತಮ್ಮ ಮೊಬೈಲ್​ನಲ್ಲಿ ಬಸ್​ ಚಕ್ರ ಕಟ್​ ಆಗಿರುವ ವಿಡಿಯೋವನ್ನು ಸೆರೆ ಹಿಡಿದ್ದಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇನ್ನಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Loading...
Unable to load recommendations.
Follow Us
ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More