AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಸ್ಪೈಸ್‌ಜೆಟ್ ಹೈಡ್ರಾಮಾ; ವಿಮಾನ ಕ್ಯಾನ್ಸಲ್‌ಗೆ ಪ್ರಯಾಣಿಕರು ಗರಂ, ಸಿಬ್ಬಂದಿಗೆ ತರಾಟೆ

ಬೆಂಗಳೂರಲ್ಲಿ ಸ್ಪೈಸ್‌ಜೆಟ್ ಹೈಡ್ರಾಮಾ; ವಿಮಾನ ಕ್ಯಾನ್ಸಲ್‌ಗೆ ಪ್ರಯಾಣಿಕರು ಗರಂ, ಸಿಬ್ಬಂದಿಗೆ ತರಾಟೆ

ನವೀನ್ ಕುಮಾರ್ ಟಿ.
| Edited By: |

Updated on: Nov 08, 2026 | 11:44 AM

Share

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಪೈಸ್‌ಜೆಟ್ ವಿಮಾನ ರದ್ದಾದ ಕಾರಣ ಪ್ರಯಾಣಿಕರು ರೋಷಾವೇಶಗೊಂಡಿದ್ದಾರೆ. ದೆಹಲಿಗೆ ತೆರಳಬೇಕಿದ್ದ ವಿಮಾನ ರದ್ದುಗೊಂಡಿದ್ದು, ಸಿಬ್ಬಂದಿ ಸಮರ್ಪಕ ಮಾಹಿತಿ ನೀಡದಿರುವುದು ಪ್ರಯಾಣಿಕರ ಕೋಪಕ್ಕೆ ಕಾರಣವಾಗಿದೆ. ಸುಮಾರು 35 ಮಂದಿ ಪ್ರಯಾಣಿಕರು ಏರ್‌ಲೈನ್ಸ್ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದ್ದು, ಮಹಿಳಾ ಸಿಬ್ಬಂದಿಯ ಮೇಲೆ ಹಲ್ಲೆಗೂ ಯತ್ನಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ದೇವನಹಳ್ಳಿ, ನವೆಂಬರ್ 08: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಸ್ಪೈಸ್‌ಜೆಟ್ ವಿಮಾನ ರದ್ದಾದ ಹಿನ್ನೆಲೆಯಲ್ಲಿ ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆಯ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ನಿನ್ನೆ (ನ.07) ನಡೆದ ಈ ಘಟನೆಯಲ್ಲಿ, ದೆಹಲಿಗೆ ತೆರಳಲು ಸ್ಪೈಸ್‌ಜೆಟ್ ವಿಮಾನದಲ್ಲಿ ಟಿಕೆಟ್ ಕಾಯ್ದಿರಿಸಿದ್ದ ಮಹಿಳೆಯೊಬ್ಬರು ಸೇರಿದಂತೆ ಹಲವು ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಏರ್‌ಲೈನ್ಸ್ ಕೊನೆಯ ಕ್ಷಣದಲ್ಲಿ ವಿಮಾನವನ್ನು ರದ್ದುಗೊಳಿಸಿದ್ದು, ಈ ಬಗ್ಗೆ ಪ್ರಯಾಣಿಕರಿಗೆ ಯಾವುದೇ ಸಮರ್ಪಕ ಮಾಹಿತಿಯನ್ನು ನೀಡಿಲ್ಲ ಎನ್ನಲಾಗಿದೆ.

ಮಾಹಿತಿ ಕೊರತೆಯಿಂದಾಗಿ ಹಾಗೂ ವಿಮಾನ ರದ್ದಾದ ಕಾರಣ ಸುಮಾರು 35 ಮಂದಿ ಪ್ರಯಾಣಿಕರು ಸ್ಪೈಸ್‌ಜೆಟ್ ಕೌಂಟರ್ ಬಳಿ ಜಮಾಯಿಸಿದ್ದಾರೆ. ಆಕ್ರೋಶಗೊಂಡ ಪ್ರಯಾಣಿಕರು ಏರ್‌ಲೈನ್ಸ್ ಸಿಬ್ಬಂದಿಯೊಂದಿಗೆ ವಾಗ್ವಾದಕ್ಕಿಳಿದಿದ್ದು, ಕೆಲವು ಪ್ರಯಾಣಿಕರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ಸಂದರ್ಭದಲ್ಲಿ ಓರ್ವ ಮಹಿಳೆ ಸ್ಪೈಸ್‌ಜೆಟ್‌ನ ಮಹಿಳಾ ಸಿಬ್ಬಂದಿಯ ಮೇಲೆ ಹಲ್ಲೆಗೂ ಯತ್ನಿಸಿದ್ದಾರೆ ಎಂದು ಹೇಳಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನವೀನ್ ಕುಮಾರ್ ಟಿ.
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More