ಇಂದಿನ ಚಿತ್ತಾಪುರದ RSS ಪಥ ಸಂಚಲನಕ್ಕೆ ಬ್ರೇಕ್; ಅಕ್ಟೋಬರ್ 24ಕ್ಕೆ ವಿಚಾರಣೆ ಮುಂದೂಡಿದ ಕಲಬುರಗಿ ಹೈಕೋರ್ಟ್ ಪೀಠ
ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ಅನುಮತಿ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ಮಾಡಿದ ಕಲಬುರಗಿ ಹೈಕೋರ್ಟ್ ಪೀಠ, ಹೊಸದಾಗಿ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚನೆ ನೀಡಿದೆ. ಕೋರ್ಟಿನ ಆದೇಶದಂತೆ ಅಕ್ಟೋಬರ್ 24ರ ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಯಲಿದೆ. ಹೀಗಾಗಿ ಇಂದು ನಡೆಯಬೇಕಿದ್ದ RSS ಪಥಸಂಚಲನಕ್ಕೆ ಬ್ರೇಕ್ ಬಿದ್ದಿದೆ.
ಕಲಬುರಗಿ, ಅಕ್ಟೋಬರ್ 19: ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ಅನುಮತಿ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ಮಾಡಿದ ಕಲಬುರಗಿ ಹೈಕೋರ್ಟ್ ಪೀಠ, ಹೊಸದಾಗಿ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚನೆ ನೀಡಿದೆ. ಒಂದು ವೇಳೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಅನುಮತಿ ಕೊಟ್ಟಲ್ಲಿ ನವೆಂಬರ್ 2 ರಂದು ಪಥ ಸಂಚಲನ ನಡೆಯುತ್ತದೆ. ಇಲ್ಲವಾದಲ್ಲಿ ಕೋರ್ಟಿನ ಆದೇಶದಂತೆ ಅಕ್ಟೋಬರ್ 24ರ ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಯಲಿದೆ. ಹೀಗಾಗಿ ಇಂದು ನಡೆಯಬೇಕಿದ್ದ RSS ಪಥಸಂಚಲನಕ್ಕೆ ಬ್ರೇಕ್ ಬಿದ್ದಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
