AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್ ಸಿನಿಮಾದಿಂದ ಅರ್ಧಕ್ಕೆ ಹೊರಬಂದೆ’; ಬಿಗ್ ಬಾಸ್ ಮಾಜಿ ಸ್ಪರ್ಧಿಯ ಶಾಕಿಂಗ್ ಹೇಳಿಕೆ

‘ಟಾಕ್ಸಿಕ್ ಸಿನಿಮಾದಿಂದ ಅರ್ಧಕ್ಕೆ ಹೊರಬಂದೆ’; ಬಿಗ್ ಬಾಸ್ ಮಾಜಿ ಸ್ಪರ್ಧಿಯ ಶಾಕಿಂಗ್ ಹೇಳಿಕೆ

ಮಂಗಳ ರಾಜ್
| Edited By: |

Updated on: Sep 01, 2026 | 9:45 AM

Share

ಬಿಗ್​ಬಾಸ್ ಸ್ಪರ್ಧಿ ಪವಿ ಪೂವಪ್ಪ ಎಂಪೈರ್ ಹಾಡಿನ ಕುರಿತು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ಮುಂಬರುವ ಬಿಗ್​ಬಾಸ್ ಸೀಸನ್ ಬಗ್ಗೆ ಕುತೂಹಲ ವ್ಯಕ್ತಪಡಿಸಿದ ಅವರು, ಗಿಲ್ಲಿ ಜೊತೆ ಪಳಾರ್ ಸಿನಿಮಾದಲ್ಲಿ ನಟಿಸುತ್ತಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಟಾಕ್ಸಿಕ್ ಸಿನಿಮಾ ಇಷ್ಟ ಆಗಿಲ್ಲ ಎಂದು ಅವರು ಹೇಳಿದ್ದಾರೆ.

ಬಿಗ್ ಬಾಸ್ ಮಾಜಿ ಸ್ಪರ್ಧಿ ಪವಿ ಪೂವಪ್ಪ ಅವರು ಟಾಕ್ಸಿಕ್ ಸಿನಿಮಾದ ಬಗ್ಗೆ ತಮ್ಮ ವೈಯಕ್ತಿಕ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ. ‘ನಿನ್ನೆ ಟಾಕ್ಸಿಕ್ ನೋಡಿದೆ. ಆನೆಸ್ಟ್ ಒಪೀನಿಯನ್ ಅಷ್ಟೊಂದೇನೂ ಇಷ್ಟ ಆಗಿಲ್ಲ. ಆದರೆ ಒಳ್ಳೆಯ ಕೆಲಸ. ಎಲ್ಲ ಇಡೀ ಟೀಮ್ ತುಂಬಾನೇ ಚೆನ್ನಾಗಿ ಮಾಡಿದ್ದಾರೆ. ಹಾರ್ಡ್​ವರ್ಕ್ ಮಾಡಿದ್ದಾರೆ. ಬಟ್, ನನಗೆ ಸಿನಿಮಾ ಇಷ್ಟ ಆಗಿಲ್ಲ’ ಎಂದು ಹೇಳಿದ್ದಾರೆ. ಸಿನಿಮಾದ ಪರಿಕಲ್ಪನೆ ಅರ್ಥವಾಗದ ಕಾರಣಕ್ಕೆ ಮಧ್ಯದಲ್ಲಿಯೇ ಎದ್ದು ಬಂದಿದ್ದಾಗಿ ತಿಳಿಸಿದ್ದಾರೆ. ಇದು ಚರ್ಚೆಗೆ ಕಾರಣ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮಂಗಳ ರಾಜ್
ಮಂಗಳ ರಾಜ್

ಮಂಗಳ ರಾಜ್ ಮೂಲತಃ ಮಧುಗಿರಿ ಬಳಿಯ ರತ್ನಗಿರಿ ರಂಗಾಪುರದವರು. ಇವರು ಸುದ್ದಿ ಮಧ್ಯಮಕ್ಕೆ ಕಾಲಿಟ್ಟು 13 ವರ್ಷಗಳಾಗಿವೆ. ಈಟಿವಿಯಲ್ಲಿ ಇಂಟರ್​ನ್​ಶಿಪ್​ , ಮಧ್ಯಮದ ಅ, ಆ ಇ ಈ ಕಲಿತಿದ್ದು ಕಸ್ತೂರಿ ನ್ಯೂಸ್ 24 ನಲ್ಲಿ ನಂತ್ರ ರಾಜ್ ನ್ಯೂಸ್, ದಿಗ್ವಿಜಯ ನ್ಯೂಸ್ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. 2021ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮುಂದುವರಿಸಿದ್ದಾರೆ. ಸಿನಿಮಾ ಅಂದ್ರೆ ಬಾಲ್ಯದಿಂದಲೂ ಹುಚ್ಚು. ಅರಸಿ ಬಂದಿದ್ದು ಸಿನಿಮಾ ಜರ್ನಲಿಸ್ಟ್ ಕೆಲಸ. ಸಿನಿಮಾ ಸುದ್ದಿಗಳ ಕವರೇಜ್, ಸಿನಿಮಾ ಹಾಗೂ ಸಿನಿಮಾ ಮಂದಿಯ ವಿವಾದಗಳು, ವಿಮರ್ಶೆ, ಸಿನಿಮಾದವರ ಸಾವು ನೋವು ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವುಗಳ ವರದಿಗಾರಿಕೆ ಇವರ ಕಾಯಕ. ಸಿನಿಮಾ ನೋಡುವುದೇ ಎಲ್ಲಾ ಆಸಕ್ತಿಗಳಿಗಿಂತ ಹೆಚ್ಚು ಆಸಕ್ತಿ.

Read More