ಮಾಧ್ಯಮಗಳ ಕ್ಯಾಮೆರಾ ಕಂಡು ಗರಂ ಆದ ಪವಿತ್ರಾ ಗೌಡ ಸಹೋದರ; ಇಲ್ಲಿದೆ ವಿಡಿಯೋ

Updated on: Jun 21, 2024 | 8:12 PM

ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯ ಕೊಲೆ ಕೇಸ್​ನಲ್ಲಿ ನಟಿ ಪವಿತ್ರಾ ಗೌಡ ಎ1 ಆಗಿದ್ದು, ಒಟ್ಟು 10 ಆರೋಪಿಗಳು ಈಗ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ದರ್ಶನ್​ ಜೊತೆ ಇನ್ನುಳಿದ ಆರೋಪಿಗಳ ಪೊಲೀಸ್​ ಕಸ್ಟಡಿ ಮುಂದುವರಿದಿದೆ. ಪರಪ್ಪನ ಅಗ್ರಹಾರದಲ್ಲಿ ಇರುವ ಪವಿತ್ರಾ ಗೌಡ ಅವರನ್ನು ನೋಡಲು ಕುಟುಂಬದವರು ಬಂದಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಕೊಲೆ ಕೇಸ್​ನಲ್ಲಿ ಸಿಲುಕಿರುವ ನಟಿ ಪವಿತ್ರಾ ಗೌಡ (Pavithra Gowda) ಈಗ ಜೈಲು ಪಾಲಾಗಿದ್ದಾರೆ. ತಮಗೆ ಅಶ್ಲೀಲ ಮೆಸೇಜ್​ ಕಳಿಸಿದ ಎಂಬ ಕಾರಣಕ್ಕಾಗಿ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬಾತನನ್ನು ಬೆಂಗಳೂರಿಗೆ ಕರೆತಂದು ಕೊಲೆ ಮಾಡಿದ ಆರೋಪದಲ್ಲಿ ಪವಿತ್ರಾ ಗೌಡ ಎ1 ಆರೋಪಿ ಆಗಿದ್ದಾರೆ. ಜೂನ್​ 20ರಂದು ಪವಿತ್ರಾ ಗೌಡ ಅವರ ಪೊಲೀಸ್​​ ಕಸ್ಟಡಿ ಅಂತ್ಯವಾಯಿತು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಯಿತು. ಈಗ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಪವಿತ್ರಾ ಗೌಡ ದಿನ ಕಳೆಯುವಂತಾಗಿದೆ. ಜೈಲಿನಲ್ಲಿ ಇರುವ ಅವರನ್ನು ನೋಡಲು ತಾಯಿ, ಚಿಕ್ಕಮ್ಮ, ಸಹೋದರ ಮುಂತಾದವರು ಬಂದಿದ್ದಾರೆ. ಈ ವೇಳೆ ಮಾಧ್ಯಮಗಳ ಕ್ಯಾಮೆರಾ ಕಂಡು ಪವಿತ್ರಾ ಗೌಡ ಸಹೋದರ (Pavithra Gowda Brother) ಗರಂ ಆಗಿದ್ದಾರೆ. ದರ್ಶನ್​ (Darshan) ಅವರ ಗೆಳತಿ ಪವಿತ್ರಾ ಗೌಡಗೆ ಕಾನೂನಿನ ಸಂಕಷ್ಟ ಹೆಚ್ಚಾಗಿದೆ. ತನಿಖೆ ಮುಂದುವರಿದಂತೆಲ್ಲ ಅನೇಕ ಶಾಕಿಂಗ್​ ಅಂಶಗಳು ಹೊರಬರುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More