‘ನನ್ನನ್ನು ಯಾರೂ ಮಾತನಾಡಿಸೋಲ್ಲ’; ಜೈಲಲ್ಲಿ ಪವಿತ್ರಾ ಗೌಡ ಕಣ್ಣೀರು

‘ನನ್ನನ್ನು ಯಾರೂ ಮಾತನಾಡಿಸೋಲ್ಲ’; ಜೈಲಲ್ಲಿ ಪವಿತ್ರಾ ಗೌಡ ಕಣ್ಣೀರು

ರಾಜೇಶ್ ದುಗ್ಗುಮನೆ
|

Updated on: Jun 26, 2024 | 8:22 AM

ಪವಿತ್ರಾ ಗೌಡ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿದ್ದಾರೆ. ಅವರು ಈ ಪ್ರಕರಣದಲ್ಲಿ ಎ1 ಆರೋಪಿ ಆಗಿದ್ದಾರೆ. ಕುಟುಂಬದ ಯಾರೂ ಅವರನ್ನು ನೋಡೋಕೆ ಬಂದಿಲ್ಲ. ಈ ವಿಚಾರದಲ್ಲಿ ಅವರಿಗೆ ಬೇಸರ ಆಗಿದೆ. ಕೊನೆಗೂ ಅವರನ್ನು ನೋಡೋಕೆ ಮನೆಯವರು ಬಂದಿದ್ದಾರೆ.

ನಟಿ ಪವಿತ್ರಾ ಗೌಡ (Pavithra Gowda) ಅವರು ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಅವರು ಅರೆಸ್ಟ್ ಆಗಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಅವರು ಜೈಲಿನಲ್ಲಿ ಕಣ್ಣೀರು ಹಾಕುತ್ತಿದ್ದಾರೆ. ಆರಂಭದಲ್ಲಿ ಪವಿತ್ರಾ ಅವರನ್ನು ನೋಡಲು ಯಾರೂ ಬಂದಿರಲಿಲ್ಲ. ಇದರಿಂದ ಅವರಿಗೆ ಬೇಸರ ಆಗಿದೆ. ಹೀಗಾಗಿ, ಮನೆಯವರ ಜೊತೆ ಕಿರಿಕ್ ಮಾಡಿದ್ದಾರೆ. ‘ನನ್ನನ್ನು ನೋಡಲು ಯಾರೂ ಬರುವುದಿಲ್ಲ. ನನ್ನನ್ನು ಯಾರೂ ಮಾತನಾಡಿಸುವುದಿಲ್ಲ’ ಎಂದು ಪವಿತ್ರಾ ಬೇಸರ ಮಾಡಿಕೊಂಡಿದ್ದರು. ಕೊನೆಗೂ ಪವಿತ್ರಾ ಮಗಳು ಹಾಗೂ ಪವಿತ್ರಾ ತಾಯಿ ಜೈಲಿಗೆ ಬಂದು ಅವರನ್ನು ನೋಡಿ ಹೋಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.