AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ಸಲ ಮಾತಾಡ್ತೀನಿ: ಪ್ರತಿಕ್ರಿಯೆ ನೀಡದೇ ಹೊರಟ ಪವಿತ್ರಾ ಗೌಡ

ಮುಂದಿನ ಸಲ ಮಾತಾಡ್ತೀನಿ: ಪ್ರತಿಕ್ರಿಯೆ ನೀಡದೇ ಹೊರಟ ಪವಿತ್ರಾ ಗೌಡ

ಮದನ್​ ಕುಮಾರ್​
|

Updated on:Feb 14, 2025 | 8:16 PM

Share

ದರ್ಶನ್ ಗೆಳತಿ ಪವಿತ್ರಾ ಗೌಡ ಅವರ ರೆಡ್​ ಕಾರ್ಪೆಟ್ ಸ್ಟುಡಿಯೋ ರೀ-ಲಾಂಚ್ ಆಗಿದೆ. ಈ ಕಾರ್ಯಕ್ರಮದಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೆ. ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದ ನಂತರ ಪವಿತ್ರಾ ಗೌಡ ಅವರು ಮತ್ತೆ ಬಿಸ್ನೆಸ್ ಕಡೆಗೆ ಗಮನ ಹರಿಸಿದ್ದಾರೆ. ಆದರೆ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿಲ್ಲ.

ಪವಿತ್ರಾ ಗೌಡ ಅವರು ರೆಡ್ ಕಾರ್ಪೆಟ್ ಸ್ಟುಡಿಯೋ ರೀ-ಲಾಂಚ್ ಮಾಡಿದ್ದಾರೆ. ಅವರ ಆಪ್ತರು ಈ ಸಮಾರಂಭಕ್ಕೆ ಸಾಕ್ಷಿ ಆಗಿದ್ದಾರೆ. ವಾಪಸ್ ತೆರಳುವಾಗ ಪವಿತ್ರಾ ಗೌಡ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಮುಂದಿನ ಸಲ ಮಾತನಾಡುವುದಾಗಿ ಹೇಳಿದ ಅವರು ನಗು ಮುಖದಲ್ಲೇ ಮನೆಗೆ ತೆರಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಜಾಮೀನು ಸಿಕ್ಕ ಬಳಿಕ ಪವಿತ್ರಾ ಗೌಡ ಅವರು ಬಿಸ್ನೆಸ್ ಬಗ್ಗೆ ಗಮನ ನೀಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Feb 14, 2025 08:14 PM

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More