ಪವಿತ್ರಾ ಗೌಡಗೆ ಜಾಮೀನು; ಮೊದಲ ಬಾರಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ತಾಯಿ

ಪವಿತ್ರಾ ಗೌಡಗೆ ಜಾಮೀನು; ಮೊದಲ ಬಾರಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ತಾಯಿ

Shivaprasad
| Updated By: ಮದನ್​ ಕುಮಾರ್​

Updated on: Dec 13, 2024 | 3:42 PM

ಇಷ್ಟು ದಿನಗಳ ಕಾಲ ಪವಿತ್ರಾ ಗೌಡ ಅವರ ತಾಯಿ ಆತಂಕದಲ್ಲೇ ಇರುತ್ತಿದ್ದರು. ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡುತ್ತಿರುಲಿಲ್ಲ. ಆದರೆ ಮಗಳಿಗೆ ಇಂದು (ಡಿ.13) ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ ಅವರು ಮೊದಲ ಬಾರಿಗೆ ಮಾತನಾಡಿದ್ದಾರೆ. ‘ಖುಷಿಯಾಗಿದೆ’ ಎಂದು ಹೇಳುವ ಮೂಲಕ ಅವರು ಸಂತಸ ಹಂಚಿಕೊಂಡಿದ್ದಾರೆ.

ಪವಿತ್ರಾ ಗೌಡ ಅವರಿಗೆ ಜಾಮೀನು ಕೊಡಿಸಲು ಅವರ ಕುಟುಂಬದವರು ಕಷ್ಟಪಟ್ಟಿದ್ದಾರೆ. ಆರು ತಿಂಗಳ ಕಾಲ ಪವಿತ್ರಾ ಗೌಡ ಜೈಲುವಾಸ ಅನುಭವಿಸಿದ್ದಾರೆ. ಈಗ ಅವರಿಗೆ ಜಾಮೀನು ಸಿಕ್ಕಿದ್ದು, ಅವರ ತಾಯಿ ಪ್ರತಿಕ್ರಿಯಿಸಿದ್ದಾರೆ. ‘ಈಗ ತುಂಬ ಖುಷಿ ಆಯಿತು’ ಎಂದು ಅವರು ಹೇಳಿದ್ದಾರೆ. ಸೋಮವಾರ (ಡಿ.17) ಪವಿತ್ರಾ ಗೌಡ ಅವರು ಜೈಲಿನಿಂದ ಹೊರಗೆ ಬರುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.