ನೀರಿನ ಸಮಸ್ಯೆ ಬಗೆಹರಿಸಲು ಸಹೋದರನಾಗಿ ಪ್ರಯತ್ನ: ಆಂಧ್ರ ಡಿಸಿಎಂ ಪವನ್ ಕಲ್ಯಾಣ್

Updated By: ಪ್ರಸನ್ನ ಹೆಗಡೆ

Updated on: Oct 06, 2025 | 2:07 PM

ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ ನಡೆದ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಅವರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಆಂಧ್ರ ಪ್ರದೇಶ ಡಿಸಿಎಂ ಪವನ್​ ಕಲ್ಯಾಣ್​ ಭಾಗಿಯಾಗಿದ್ದಾರೆ. ಈ ವೇಳೆ ಮಾತನಾಡಿದ ಅವರು ಇಲ್ಲಿನ ನೀರಿನ ಸಮಸ್ಯೆ ಬಗೆಹರಿಸಲು ಸಹೋದರನಾಗಿ ಪ್ರಯತ್ನ ಮಾಡುವ ಬಗ್ಗೆ ಭರವಸೆ ನೀಡಿದ್ದಾರೆ.

ಚಿಕ್ಕಬಳ್ಳಾಪುರ, ಅಕ್ಟೋಬರ್​ 06: ಕೋಲಾರ-ಚಿಕ್ಕಬಳ್ಳಾಪುರ ಬೆಂಗಳೂರಿಗೆ ಅಹಾರ ನೀಡುವ ಅಕ್ಷಯ ಪಾತ್ರೆಯಾಗಿದ್ದು, ಇಲ್ಲಿನ ನೀರಿನ ಸಮಸ್ಯೆ ಬಗೆಹರಿಸಲು ಸಹೋದರನಾಗಿ ಪ್ರಯತ್ನ ಮಾಡುವೆ. ಆಂಧ್ರ ಪ್ರದೇಶ ಮತ್ತು ಕರ್ನಾಟಕದ ಸಂಬಂಧ ಪರಸ್ಪರ ಗೌರವದಿಂದ ಕೂಡಿದೆ.  ಕಲೆ ಮತ್ತು ಸಂಸ್ಕೃತಿ ನಮ್ಮನ್ನ ಒಂದೂಗಿಡಿಸಬೇಕೇ ವಿನಃ ಬೇರ್ಪಡಿಸಿಬಾರದು. ನಾವೆಲ್ಲ ಭಾರತ ಮಾತೆಯ ಮಕ್ಕಳು ಎಂದು ಆಂಧ್ರ ಪ್ರದೇಶ ಡಿಸಿಎಂ ಪವನ್​ ಕಲ್ಯಾಣ್ (Pawan Kalyan)​ ಹೇಳಿದ್ದಾರೆ. ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಅವರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು, ಕರ್ನಾಟಕ ಪ್ರಜೆಗಳಿಗೆ ನನ್ನ ನಮಸ್ಕಾರ ಎಂದು ಕನ್ನಡದಲ್ಲಿಯೇ ಭಾಷಣ ಆರಂಭಿಸಿದರು. ಕರ್ನಾಟಕವು ಅದ್ಭುತ ಪರಂಪರೆ, ಸಂಸ್ಕೃತಿಯ ನಾಡು. ಚಿಂತಾಮಣಿಗೆ ಬಂದಿರೋದು ಗೌರವದ ವಿಷಯ ಎಂದು ಪವನ್​ ಕಲ್ಯಾಣ್​ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.