ಬೆಂಗಳೂರು: ವಿಧಾನಸೌಧಕ್ಕೆ ಬಂದ ಪವನ್ ಕಲ್ಯಾಣ್ ನೋಡಲು ಮುಗಿಬಿದ್ದ ಸರ್ಕಾರಿ ನೌಕರರು

| Updated By: ಆಯೇಷಾ ಬಾನು

Updated on: Aug 08, 2024 | 3:07 PM

ಸಿಎಂ ಭೇಟಿ ಬಳಿಕ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಅರಣ್ಯ ಇಲಾಖೆ ಸಭೆಯಲ್ಲಿ ಭಾಗಿಯಾಗಲು ವಿಧಾನಸೌಧಕ್ಕೆ ಬರುತ್ತಿದ್ದಂತೆ ವಿಧಾನಸೌಧದಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿ, ಸರ್ಕಾರಿ ನೌಕರರು ಫೋಟೋ ಕ್ಲಿಕ್ಕಿಸಲು ಮುಗಿಬಿದ್ದರು. ಸಚಿವ ಈಶ್ವರ ಖಂಡ್ರೆ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆಯುತ್ತಿರುವ ಆನೆ ಹಾವಳಿ ತಡೆಗಟ್ಟುವ ಸಂಬಂಧದ ಸಭೆಗೆ ಆಂಧ್ರದ ಪರಿಸರ ಮತ್ತು ಅರಣ್ಯ ಖಾತೆ ಸಚಿವ ಪವನ್ ಕಲ್ಯಾಣ್ ಭಾಗಿಯಾಗಿದ್ದಾರೆ.

ಬೆಂಗಳೂರು, ಆಗಸ್ಟ್‌ 08: ತೆಲುಗು ನಟ, ಜನಸೇನಾ ಪಕ್ಷದ ಮುಖ್ಯಸ್ಥ, ಆಂಧ್ರ ಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ (Pawan Kalyan) ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ಸಿಎಂ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿದರು. ಅರಣ್ಯ ಇಲಾಖೆ ಸಭೆ ಹಿನ್ನೆಲೆ ಬೆಂಗಳೂರಿಗೆ ಆಗಮಿಸಿದ್ದ ಪವನ್ ಕಲ್ಯಾಣ್ ಸಭೆ ಆರಂಭಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ ಸಚಿವ ಜಮೀರ್ ಅಹಮದ್ ಕೂಡ ಉಪಸ್ಥಿತರಿದ್ದರು. ಬಳಿಕ ಸಭೆಯಲ್ಲಿ ಹಾಜರಾಗಲು ವಿಧಾನಸೌಧಕ್ಕೆ ಆಗಮಿಸಿದ್ದು ಸಿಬ್ಬಂದಿ ಪವನ್ ಕಲ್ಯಾಣ್ ಜೊತೆ ಫೋಟೋ ಕ್ಲಿಕ್ಕಿಸಲು ಮುಗಿಬಿದ್ದಿದ್ದರು.

ಆಂಧ್ರ ಪ್ರದೇಶದಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಇದೇ ಮೊದಲ ಬಾರಿಗೆ ಪವನ್ ಕಲ್ಯಾಣ್ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದಾರೆ. ಸಿಎಂ ಭೇಟಿ ಬಳಿಕ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಅರಣ್ಯ ಇಲಾಖೆ ಸಭೆಯಲ್ಲಿ ಭಾಗಿಯಾಗಲು ವಿಧಾನಸೌಧಕ್ಕೆ ಬರುತ್ತಿದ್ದಂತೆ ವಿಧಾನಸೌಧದಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿ, ಸರ್ಕಾರಿ ನೌಕರರು ಫೋಟೋ ಕ್ಲಿಕ್ಕಿಸಲು ಮುಗಿಬಿದ್ದರು.

ರಾಜ್ಯದ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆಯುತ್ತಿರುವ ಆನೆ ಹಾವಳಿ ತಡೆಗಟ್ಟುವ ಸಂಬಂಧದ ಸಭೆಗೆ ಆಂಧ್ರದ ಪರಿಸರ ಮತ್ತು ಅರಣ್ಯ ಖಾತೆ ಸಚಿವ ಪವನ್ ಕಲ್ಯಾಣ್ ಭಾಗಿಯಾಗಿದ್ದಾರೆ. ಕರ್ನಾಟಕ ದಕ್ಷಿಣ ಭಾರತದಲ್ಲಿ ಹೆಚ್ಚು ಆನೆಗಳಿರುವ ರಾಜ್ಯ. 2022-23ರಲ್ಲಿ ನಡೆದ ಆನೆಗಳ ಗಣತಿ ಬಳಿಕ ಆನೆಗಳ ಸಂಖ್ಯೆಯಲ್ಲಿ ಕರ್ನಾಟಕವೇ ಮೊದಲ ಸ್ಥಾನದಲ್ಲಿದೆ. ರಾಜ್ಯದಲ್ಲಿ 6,395 ಆನೆಗಳಿವೆ. ಪ್ರತಿ 5 ವರ್ಷಗಳಿಗೊಮ್ಮೆ ಆನೆಗಳ ಗಣತಿ ನಡೆಸಲಾಗುತ್ತದೆ.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Published on: Aug 08, 2024 03:06 PM