ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್, ಶಾಸಕ ಪ್ರದೀಪ್ ಈಶ್ವರ್
ಕೈವಾರ ತಾತಯ್ಯ ಜಯಂತಿ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದ ಪಿ.ಸಿ. ಮೋಹನ್ ಬಿಜೆಪಿಯ ಸಾಧನೆಗಳನ್ನು ಪ್ರಸ್ತಾಪಿಸಿದಾಗ, ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಇದು ಸರ್ಕಾರಿ ಕಾರ್ಯಕ್ರಮವಾಗಿದ್ದು, ಪಕ್ಷ ರಾಜಕೀಯಕ್ಕೆ ಅವಕಾಶವಿಲ್ಲ ಎಂದು ಅವರು ವಾದಿಸಿದರು. ಮಾತಿಗೆ ಮಾತು ಬೆಳೆದು, ಪ್ರದೀಪ್ ಈಶ್ವರ್ ಕಾರ್ಯಕ್ರಮವನ್ನು ಬಹಿಷ್ಕರಿಸಿ ಹೊರನಡೆದರು.
ಬೆಂಗಳೂರು, ಮಾರ್ಚ್ 14: ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದಿದ್ದ ಕೈವಾರ ತಾತಯ್ಯ ಜಯಂತಿ ಕಾರ್ಯಕ್ರಮದಲ್ಲಿ ಸಂಸದ ಪಿ.ಸಿ.ಮೋಹನ್ ಮತ್ತು ಶಾಸಕ ಪ್ರದೀಪ್ ಈಶ್ವರ್ (Pradeep Eshwar) ನಡುವೆ ವಾಗ್ವಾದ ಉಂಟಾಗಿದೆ. ಬಿಜೆಪಿಯ ಕೊಡುಗೆಗಳ ಬಗ್ಗೆ ಪಿ.ಸಿ.ಮೋಹನ್ ಹೊಗಳುತ್ತಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಶಾಸಕ ಪ್ರದೀಪ್ ಈಶ್ವರ್ ಇದು ಸರ್ಕಾರಿ ಕಾರ್ಯಕ್ರಮ ಎಂದಿದ್ದಾರೆ. ಒಂದು ಪಕ್ಷದ ತುತ್ತೂರಿ ಊದುವುದು ಬೇಡೆಂದು ಆಕ್ಷೇಪ ವ್ಯಕ್ತಪಡಿಸಲಾಗಿದೆ. ಇದಕ್ಕೆ ಪ್ರತಿರೋಧವಾಗಿ ಮಾತನಾಡಿದ ಸಂಸದ ಪಿ.ಸಿ.ಮೋಹನ್, ಮಾತಿಗೆ ಮಾತು ಬೆಳೆದು ಪ್ರದೀಪ್ ಈಶ್ವರ್ ಕಾರ್ಯಕ್ರಮ ಬಹಿಷ್ಕರಿಸಿದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos

ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್

ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್

ರಾಜಣ್ಣಗೆ ಮಾತ್ರವಲ್ಲ ಪುತ್ರನಿಗೂ ಹನಿಟ್ರ್ಯಾಪ್ ಬಲೆಗೆ ಬೀಳಿಸುವ ಸಂಚು!

ಹನಿಟ್ರ್ಯಾಪ್ ಕೇಸ್ ಉನ್ನತ ಮಟ್ಟದ ತನಿಖೆಗೆ: ಸದನದಲ್ಲೇ ಘೋಷಿಸಿದ ಗೃಹ ಸಚಿವ
