ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಶಾಸಕ ಪ್ರದೀಪ್​ ಈಶ್ವರ್

Edited By:

Updated on: Mar 14, 2025 | 8:33 PM

ಕೈವಾರ ತಾತಯ್ಯ ಜಯಂತಿ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದ ಪಿ.ಸಿ. ಮೋಹನ್ ಬಿಜೆಪಿಯ ಸಾಧನೆಗಳನ್ನು ಪ್ರಸ್ತಾಪಿಸಿದಾಗ, ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಇದು ಸರ್ಕಾರಿ ಕಾರ್ಯಕ್ರಮವಾಗಿದ್ದು, ಪಕ್ಷ ರಾಜಕೀಯಕ್ಕೆ ಅವಕಾಶವಿಲ್ಲ ಎಂದು ಅವರು ವಾದಿಸಿದರು. ಮಾತಿಗೆ ಮಾತು ಬೆಳೆದು, ಪ್ರದೀಪ್ ಈಶ್ವರ್ ಕಾರ್ಯಕ್ರಮವನ್ನು ಬಹಿಷ್ಕರಿಸಿ ಹೊರನಡೆದರು.

ಬೆಂಗಳೂರು, ಮಾರ್ಚ್​ 14: ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದಿದ್ದ ಕೈವಾರ ತಾತಯ್ಯ ಜಯಂತಿ  ಕಾರ್ಯಕ್ರಮದಲ್ಲಿ ಸಂಸದ ಪಿ.ಸಿ.ಮೋಹನ್ ಮತ್ತು ಶಾಸಕ ಪ್ರದೀಪ್​ ಈಶ್ವರ್ (Pradeep Eshwar) ನಡುವೆ ವಾಗ್ವಾದ ಉಂಟಾಗಿದೆ. ಬಿಜೆಪಿಯ ಕೊಡುಗೆಗಳ ಬಗ್ಗೆ ಪಿ.ಸಿ.ಮೋಹನ್ ಹೊಗಳುತ್ತಿದ್ದ‌ರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಶಾಸಕ ಪ್ರದೀಪ್​ ಈಶ್ವರ್​​ ಇದು ಸರ್ಕಾರಿ ಕಾರ್ಯಕ್ರಮ ಎಂದಿದ್ದಾರೆ. ಒಂದು ಪಕ್ಷದ ತುತ್ತೂರಿ ಊದುವುದು ಬೇಡೆಂದು ಆಕ್ಷೇಪ ವ್ಯಕ್ತಪಡಿಸಲಾಗಿದೆ. ಇದಕ್ಕೆ ಪ್ರತಿರೋಧವಾಗಿ ಮಾತನಾಡಿದ ಸಂಸದ ಪಿ.ಸಿ.ಮೋಹನ್, ಮಾತಿಗೆ ಮಾತು ಬೆಳೆದು ಪ್ರದೀಪ್ ಈಶ್ವರ್ ಕಾರ್ಯಕ್ರಮ ಬಹಿಷ್ಕರಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More