PDO ಪರೀಕ್ಷೆಯಲ್ಲೂ ಎಡವಟ್ಟು, ಅರ್ಧಂಬರ್ಧ ಪ್ರಶ್ನೆ ಪತ್ರಿಕೆ ಕಳುಹಿಸಿದ KPSC

PDO ಪರೀಕ್ಷೆಯಲ್ಲೂ ಎಡವಟ್ಟು, ಅರ್ಧಂಬರ್ಧ ಪ್ರಶ್ನೆ ಪತ್ರಿಕೆ ಕಳುಹಿಸಿದ KPSC
ಭೀಮೇಶ್​​ ಪೂಜಾರ್
| Updated By: ರಮೇಶ್ ಬಿ. ಜವಳಗೇರಾ

Updated on: Nov 17, 2024 | 11:50 AM

ಕೆಪಿಎಸ್​ಸಿ ಮೇಲೆ ಒಂದಲ್ಲ ಒಂದು ಆರೋಪಗಳು ಬರುತ್ತಲೇ ಇವೆ. ಸರಿಯಾಗಿ ಪ್ರಶ್ನೆ ಪತ್ರಿಕೆ ತಯಾರಿಸುತ್ತಿಲ್ಲ ಎನ್ನುವ ಆರೋಪಗಳು ಪದೇ ಪದೇ ಕೇಳಿಬರುತ್ತಲೇ ಇವೆ. ಇದೀಗ ಪಿಡಿಒ ಪರೀಕ್ಷೆಯಲ್ಲೂ ಸಹ ಕೆಪಿಎಸ್​ಇ ಎಡವಟ್ಟು ಮಾಡಿಕೊಂಡಿದೆ.

ರಾಯಚೂರು, (ನವೆಂಬರ್ 17): ಪಿಡಿಒ ಪರೀಕ್ಷೆಯಲ್ಲೂ ಸಹ ಕೆಪಿಎಸ್​ಇ ಎಡವಟ್ಟು ಮಾಡಿಕೊಂಡಿದೆ. ಅರ್ಧಂಬರ್ಧ ಪ್ರಶ್ನೆ ಪತ್ರಿಕೆಗಳನ್ನು ಕಳುಹಿಸಿದೆ. ಇದರಿಂದ ಪರೀಕ್ಷೆ ಬರೆಯಲು ಬಂದಿರುವ ಅಭ್ಯರ್ಥಿಗಳು ಪ್ರಶ್ನೆ ಪತ್ರಿಕೆ ಸಿಗದೇ ಕಂಗಾಲಾಗಿದ್ದಾರೆ. ಹೌದು….ಪರೀಕ್ಷೆಯಲ್ಲಿ 24ರ ಬದಲು 12 ಪ್ರಶ್ನೆ ಪತ್ರಿಕೆ ಹಂಚಿದ ಆರೋಪ ರಾಯಚೂರಿನಲ್ಲಿ ಕೇಳಿಬಂದಿದೆ. ಒಂದು ಕೊಠಡಿಯಲ್ಲಿ 24 ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಆದ್ರೆ, ರಾಯಚೂರು ಜಿಲ್ಲೆಯ ಸಿಂಧನೂರಿನ ಸರ್ಕಾರಿ ಡಿಗ್ರಿ ಕಾಲೇಜಿನಲ್ಲಿ 12 ಪ್ರಶ್ನೆ ಪತ್ರಿಕೆಗಳನ್ನು ಮಾತ್ರ ಹಂಚಿಕೆ ಮಾಡಲಾಗಿದೆ. ಇದರಿಂದ ಅಭ್ಯರ್ಥಿಗಳು ಕೆಪಿಎಸ್​ಸಿ ವಿದ್ಯಾರ್ಥಿ ಸಿಡಿದೆದಿದ್ದಾರೆ. ಬೇರೆ ಬೇರೆ ಜಿಲ್ಲೆಗಳಿಂದ ಅಭ್ಯರ್ಥಿ ಸಿಂಧನೂರು-ಕುಷ್ಟಗಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸ್ ಹಾಗೂ ತಹಶೀಲ್ದಾರ್ ಅರುಣ್ ಕುಮಾರ್​ ಅಭ್ಯರ್ಥಿಗಳ ಮನವೊಲಿಸುವ ಪ್ರಯತ್ನ ಮಾಡಿದರು. ಅಲ್ಲದೇ ಪರೀಕ್ಷೆ ಬರೆಯುವರು ಬರೆಯಿರಿ. ಇಷ್ಟವಿಲ್ಲದವರು ಹೋಗಿ ಎಂದು ಅವಾಜ್ ಹಾಕಿದ್ದಾರೆ. ಇದರಿಂದ ಕೆರಳಿದ ಅಭ್ಯರ್ಥಿಗಳು ತಹಶೀಲ್ದಾರ್​​ ನಡೆಗೆ ಆಕ್ರೋಶ ಹೊರಹಾಕಿದ್ದಾರೆ.

Follow us
ಎಸ್​ಎಸ್​ಎಲ್​ಸಿಯಲ್ಲಿ ಫೇಲ್ ಆಗಿದ್ದಕ್ಕೆ ವಿಗ್ರಹ ವಿರೂಪಗೊಳಿಸಿದ ಬಾಲಕ
ಎಸ್​ಎಸ್​ಎಲ್​ಸಿಯಲ್ಲಿ ಫೇಲ್ ಆಗಿದ್ದಕ್ಕೆ ವಿಗ್ರಹ ವಿರೂಪಗೊಳಿಸಿದ ಬಾಲಕ
Nithya Bhavishya: ಈ ರಾಶಿಯವರಿಗೆ ಇಂದು ನಿವೇಶನ ಖರೀದಿಸುವ ಯೋಗವಿದೆ
Nithya Bhavishya: ಈ ರಾಶಿಯವರಿಗೆ ಇಂದು ನಿವೇಶನ ಖರೀದಿಸುವ ಯೋಗವಿದೆ
ರೇಷನ್‌ ಕಾರ್ಡ್ ರದ್ದಾಗಿರುವುದಕ್ಕೆ ಸರ್ಕಾರದ ವಿರುದ್ಧ ಮಹಿಳೆಯರು ಕಿಡಿ
ರೇಷನ್‌ ಕಾರ್ಡ್ ರದ್ದಾಗಿರುವುದಕ್ಕೆ ಸರ್ಕಾರದ ವಿರುದ್ಧ ಮಹಿಳೆಯರು ಕಿಡಿ
ವಕ್ಫ್ ವಿವಾದದ ಬಗ್ಗೆ ಯಡಿಯೂರಪ್ಪ-ವಿಜಯೇಂದ್ರಗೆ ಕಾಳಜಿಯಿಲ್ಲ: ಯತ್ನಾಳ್
ವಕ್ಫ್ ವಿವಾದದ ಬಗ್ಗೆ ಯಡಿಯೂರಪ್ಪ-ವಿಜಯೇಂದ್ರಗೆ ಕಾಳಜಿಯಿಲ್ಲ: ಯತ್ನಾಳ್
‘ಶ್... ಬಾಯ್ಮುಚ್ಚು‘: ಸುಳ್ಳು ಹೇಳಿದ ಚೈತ್ರಾ ಮೇಲೆ ಕಿಚ್ಚ ಕೆಂಡ
‘ಶ್... ಬಾಯ್ಮುಚ್ಚು‘: ಸುಳ್ಳು ಹೇಳಿದ ಚೈತ್ರಾ ಮೇಲೆ ಕಿಚ್ಚ ಕೆಂಡ
ಸ್ಟಾರ್ ಪ್ರಚಾರಕ ಅಲ್ಲ, ಹಾಗಾಗೇ ಚನ್ನಪಟ್ಟಣದಲ್ಲಿ ಪ್ರಚಾರ ಮಾಡಿಲ್ಲ:ಯತ್ನಾಳ್
ಸ್ಟಾರ್ ಪ್ರಚಾರಕ ಅಲ್ಲ, ಹಾಗಾಗೇ ಚನ್ನಪಟ್ಟಣದಲ್ಲಿ ಪ್ರಚಾರ ಮಾಡಿಲ್ಲ:ಯತ್ನಾಳ್
ನಾನ್ಯಾಕೆ ಬೇಡವಾಗಿದ್ದೇನೆಂದು ಕುಮಾರಸ್ವಾಮಿಯೇ ಹೇಳಬೇಕು: ದೇವೇಗೌಡ
ನಾನ್ಯಾಕೆ ಬೇಡವಾಗಿದ್ದೇನೆಂದು ಕುಮಾರಸ್ವಾಮಿಯೇ ಹೇಳಬೇಕು: ದೇವೇಗೌಡ
ಜಾಗೃತಿ ಅಭಿಯಾನಕ್ಕಾಗಿ ವಿಜಯೇಂದ್ರ 3 ತಂಡಗಳನ್ನು ರಚಿಸಿದ್ದಾರೆ: ಯಡಿಯೂರಪ್ಪ
ಜಾಗೃತಿ ಅಭಿಯಾನಕ್ಕಾಗಿ ವಿಜಯೇಂದ್ರ 3 ತಂಡಗಳನ್ನು ರಚಿಸಿದ್ದಾರೆ: ಯಡಿಯೂರಪ್ಪ
ನಂಬಿಕೆಗಳ ಮಹಾ ತರ್ಕ, ಲೆಕ್ಕಚಾರ ಮಾಡಲು ಬಂದ ಸುದೀಪ್
ನಂಬಿಕೆಗಳ ಮಹಾ ತರ್ಕ, ಲೆಕ್ಕಚಾರ ಮಾಡಲು ಬಂದ ಸುದೀಪ್
ವಕ್ಫ್ ಭೂವಿವಾದ; ಬಿಜೆಪಿಯ ಪ್ರಸ್ತಾಪಿತ ಜಾಗೃತಿ ಜಾಥಾಗೆ ಸಮನ್ವಯತೆಯ ಕೊರತೆ
ವಕ್ಫ್ ಭೂವಿವಾದ; ಬಿಜೆಪಿಯ ಪ್ರಸ್ತಾಪಿತ ಜಾಗೃತಿ ಜಾಥಾಗೆ ಸಮನ್ವಯತೆಯ ಕೊರತೆ