AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ

ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ

ಮಂಜುನಾಥ ಕೆಬಿ
| Edited By: |

Updated on: Feb 03, 2026 | 3:18 PM

Share

ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ ಅವರು ಹಾಸನದಲ್ಲಿ ಸೈಟ್ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದ ಮಾಡಿಕೊಂಡಿದ್ದಾರೆ. ಪಿಡಿಒ ನಟರಾಜ್ ವಿರುದ್ಧ ಅವರು ಆರೋಪ ಮಾಡಿದ್ದರು. ಅದಕ್ಕೆ ಸ್ವತಃ ನಟರಾಜ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಮೇಲಿನ ಆರೋಪಗಳನ್ನು ನಟರಾಜ್ ಅವರು ತಳ್ಳಿಹಾಕಿದ್ದಾರೆ.

ನಟ ಯಶ್ ಅವರ ತಾಯಿ ಪುಷ್ಪಾ ಅರುಣ್ ಕುಮಾರ್ (Pushpa Arun Kumar) ಹಾಸನದಲ್ಲಿ ಸೈಟ್ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದ ಮಾಡಿಕೊಂಡಿದ್ದಾರೆ. ಪಿಡಿಒ ನಟರಾಜ್ ವಿರುದ್ಧ ಅವರು ಆರೋಪ ಮಾಡಿದ್ದರು. ಅದಕ್ಕೆ ಸ್ವತಃ ನಟರಾಜ್ ಅವರು ಪ್ರತಿಕ್ರಿಯೆ ಈಗ ನೀಡಿದ್ದಾರೆ. ಟಿವಿ9 ಜೊತೆ ಅವರು ಮಾತನಾಡಿದ್ದಾರೆ. ತಮ್ಮ ಮೇಲಿನ ಆರೋಪಗಳನ್ನು ನಟರಾಜ್ (PDO Nataraj) ಅವರು ತಳ್ಳಿಹಾಕಿದ್ದಾರೆ. ‘ಸತ್ಯಮಂಗಲ ಗ್ರಾಮ ಪಂಚಾಯಿತಿಯಲ್ಲಿ 2018ರಿಂದ 2022ರ ತನಕ ಕೆಲಸ ಮಾಡಿದ್ದೇನೆ. ಆ ಸಮಯದಲ್ಲಿ ಇ-ಸ್ವತ್ತು ನಾನೇ ಮಾಡಿಕೊಟ್ಟಿದ್ದು. ಹಾಗಿದ್ದರೂ ನನ್ನ ಮೇಲೆ ಅವರು ಆರೋಪ ಮಾಡುತ್ತಿದ್ದಾರೆ. ಯಾಕೆ ಎಂಬುದು ಗೊತ್ತಿಲ್ಲ. ನಾವು ನಮ್ಮ ವೃತ್ತಿ ಮಾಡಿದ್ದೇವೆ. ಸುಳ್ಳರು, ಕಳ್ಳರು ಅಂತ ಹೇಳಿದರೆ ನೋವಾಗುತ್ತದೆ. ನಾನು ಕೂಡ ವಕೀಲನಾಗಿ ಕೆಲವು ವರ್ಷ ಕೆಲಸ ಮಾಡಿದ್ದೇನೆ. ಪುಷ್ಪಾ ಅವರ ಮೇಲೆ ಮಾನನಷ್ಟ ಮೊಕದ್ದಮೆ ಹೂಡುವ ಬಗ್ಗೆ ಆಲೋಚನೆ ಮಾಡಿದ್ದೇನೆ’ ಎಂದು ನಟರಾಜ್ ಅವರು ಹೇಳಿದ್​ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.