ಪೀಣ್ಯ ಫ್ಲೈಓವರ್ ಬಂದ್ನಿಂದ ವಾಹನ ಸವಾರರು ಕಂಗಾಲು: 10 ನಿಮಿಷದಲ್ಲಿ ಹೋಗೋ ದಾರಿಗೆ 1 ಗಂಟೆ ಬೇಕೆಂದು ಅಳಲು
ಬೆಂಗಳೂರಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ (ಡಾ. ಶಿವಕುಮಾರ ಸ್ವಾಮೀಜಿ ಫ್ಲೈಓವರ್) ಮೇಲೆ ಕೇಬಲ್ ದುರಸ್ತಿ ಮತ್ತು ಲೋಡ್ ಪರೀಕ್ಷೆಗಾಗಿ ನಾಲ್ಕು ದಿನಗಳ ಕಾಲ ಸಂಚಾರ ನಿರ್ಬಂಧ ಹೇರಲಾಗಿದೆ. ಇದರಿಂದ ತುಮಕೂರು ರಸ್ತೆಯಲ್ಲಿ ವ್ಯಾಪಕ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಹೆಚ್ಚು ಸಮಯ ವ್ಯಯಿಸಿ ಪರದಾಡುತ್ತಿದ್ದಾರೆ.
ಬೆಂಗಳೂರು, ಮೇ 5: ಬೆಂಗಳೂರಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ನಲ್ಲಿ ನಾಲ್ಕು ದಿನಗಳ ಕಾಲ ಸಂಚಾರ ನಿರ್ಬಂಧ ಹೇರಲಾಗಿದ್ದು, ಇದು ನಗರದಲ್ಲಿ ತೀವ್ರ ಟ್ರಾಫಿಕ್ ಸಮಸ್ಯೆಗೆ ಕಾರಣವಾಗಿದೆ. ಡಾ. ಶಿವಕುಮಾರ ಸ್ವಾಮೀಜಿ ಫ್ಲೈಓವರ್ ಮೇ 8ರ ಬೆಳಿಗ್ಗೆ 11 ಗಂಟೆಯವರೆಗೆ ಸಂಚಾರಕ್ಕೆ ಲಭ್ಯವಿರುವುದಿಲ್ಲ. ಫ್ಲೈಓವರ್‌ನಲ್ಲಿರುವ 1422 ಕೇಬಲ್‌ಗಳ ದುರಸ್ತಿ ಮತ್ತು ಲೋಡ್ ಪರೀಕ್ಷೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಸಾಮಾನ್ಯವಾಗಿ 15-20 ನಿಮಿಷಗಳಲ್ಲಿ ಸಂಚರಿಸಬಹುದಾದ ಮಾರ್ಗವನ್ನು ಈಗ ಕೆಳರಸ್ತೆಯಲ್ಲಿ ಸಂಚರಿಸಲು ಸುಮಾರು ಒಂದೂವರೆ ಗಂಟೆ ಬೇಕಾಗುತ್ತಿದೆ ಎಂದು ವಾಹನ ಸವಾರರು ಅಳಲು ತೋಡಿಕೊಂಡಿದ್ದಾರೆ. ಇದರಿಂದ ಗೊರಗುಂಟೆಪಾಳ್ಯ, ಪೀಣ್ಯ, ಜಾಲಹಳ್ಳಿ, ಮತ್ತು ಎಸ್‌ಆರ್‌ಎಸ್ ಜಂಕ್ಷನ್‌ಗಳ ಸುತ್ತಮುತ್ತ ವ್ಯಾಪಕ ಟ್ರಾಫಿಕ್ ಜಾಮ್ ಉಂಟಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್ಶಾನ ನೋಡಲು ಮುಗಿಬಿದ್ದ ಜನ
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್: ಯುವಕ ಅರೆಸ್ಟ್
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?

