ಬೆಂಗಳೂರಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ 4 ದಿನ ಬಂದ್: ತುಮಕೂರು ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್
ಬೆಂಗಳೂರಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಅನ್ನು ಇಂದಿನಿಂದ ಮೇ 8ರವರೆಗೆ, ಒಟ್ಟು 4 ದಿನಗಳ ಕಾಲ ಬಂದ್ ಮಾಡಲಾಗಿದೆ. ಕೇಬಲ್ ಅಳವಡಿಕೆ ದುರಸ್ತಿ ಕಾಮಗಾರಿ ಹಾಗೂ ಲೋಡ್ ಟೆಸ್ಟ್ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಫ್ಲೈಓವರ್ ಬಂದ್ ಆಗಿರುವ ಕಾರಣ ತುಮಕೂರು ರಸ್ತೆಯಲ್ಲಿ, ಗೊರಗುಂಟೆಪಾಳ್ಯದವರೆಗೆ ಭಾರಿ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ.
ಬೆಂಗಳೂರು, ಮೇ 5: ಬೆಂಗಳೂರಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಅನ್ನು ಇಂದಿನಿಂದ ಮೇ 8ರವರೆಗೆ ಒಟ್ಟು 4 ದಿನಗಳ ಕಾಲ ಬಂದ್ ಮಾಡಲಾಗಿದೆ. ಫ್ಲೈಓವರ್‌ನ ಕೇಬಲ್ ಅಳವಡಿಕೆ ದುರಸ್ತಿ ಕಾಮಗಾರಿ ಮತ್ತು ಲೋಡ್ ಟೆಸ್ಟ್ ನಡೆಸುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ. ಪೀಣ್ಯ ಫ್ಲೈಓವರ್ ಬಂದ್ ಆಗಿರುವ ಕಾರಣ ತುಮಕೂರು ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ಗೊರಗುಂಟೆಪಾಳ್ಯದವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ. ಈ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿದ ವಾಹನ ಸವಾರರು ತಮ್ಮ ಗಮ್ಯಸ್ಥಾನ ತಲುಪಲು ಪರದಾಡುತ್ತಿದ್ದಾರೆ. ಸಂಚಾರ ದಟ್ಟಣೆಯಿಂದಾಗಿ ಪ್ರಯಾಣಿಕರು ಅನಗತ್ಯ ವಿಳಂಬ ಮತ್ತು ಅನಾನುಕೂಲತೆಯನ್ನು ಎದುರಿಸುತ್ತಿದ್ದಾರೆ. ಸಾರ್ವಜನಿಕರು ಸಹಕರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
3 ವರ್ಷದ ಮಗುವಿನ ಮೇಲೆ ಬೀದಿನಾಯಿ ದಾಳಿ: ಕುಟುಂಬಸ್ಥರಿಗೆ ಆಘಾತ ತಂದ ಘಟನೆ
ಚೇತನ್ ಇನ್ನಾದರೂ ಮನುಷ್ಯನಾಗು: ವಿವಾದದ ಬಳಿಕ ಸಾರಾ ಗೋವಿಂದು ಕಿವಿಮಾತು
ಶೃಂಗೇರಿ ಶಾಸಕರ ಪ್ರಮಾಣವಚನಕ್ಕೆ ವಿಳಂಬ ಮಾಡಿಲ್ಲ: ಸ್ಪೀಕರ್ ಖಾದರ್ ಸ್ಪಷ್ಟನೆ
ಬಿಜೆಪಿ-ಟಿಎಂಸಿ ಕಾರ್ಯಕರ್ತರ ಮಧ್ಯೆ ಭಾರೀ ಸಂಘರ್ಷ, ಉದ್ವಿಗ್ನ ಪರಿಸ್ಥಿತಿ

