ಪ್ರಜ್ವಲ್​ ರೇವಣ್ಣರನ್ನ SIT ಕಚೇರಿಗೆ ಕರೆತಂದ ಜೀಪ್​ನಲ್ಲಿದ್ದವರೆಲ್ಲ ಮಹಿಳಾ ಸಿಬ್ಬಂದಿ

ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಗುರವಾರ ಮಧ್ಯರಾತ್ರಿ ಬೆಂಗಳೂರಿನ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಎಸ್​ಐಟಿ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದುಕೊಂಡರು.

ಪ್ರಜ್ವಲ್​ ರೇವಣ್ಣರನ್ನ SIT ಕಚೇರಿಗೆ ಕರೆತಂದ ಜೀಪ್​ನಲ್ಲಿದ್ದವರೆಲ್ಲ ಮಹಿಳಾ ಸಿಬ್ಬಂದಿ
|

Updated on:May 31, 2024 | 8:33 AM

ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರು ಭಾರತಕ್ಕೆ ಬಂದಿದ್ದಾರೆ. ಕಳೆದ 34 ದಿನಗಳಿಂದ ಜರ್ಮನಿಯಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್​ ರೇವಣ್ಣ ಅವರು ಗುರವಾರ ಮಧ್ಯರಾತ್ರಿ ಬೆಂಗಳೂರಿನ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಪ್ರಜ್ವಲ್​ ರೇವಣ್ಣ ಅವರು ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ಎಸ್​ಐಟಿ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದುಕೊಂಡರು. ವಿಮಾನ ನಿಲ್ದಾಣದ ಹಿಂದಿನ ಗೇಟ್​ ಮೂಲಕ ಪ್ರಜ್ವಲ್​ ರೇವಣ್ಣ ಅವರನ್ನು ಹೊರಗೆ ಕರೆತರಲಾಯಿತು.

ಪ್ರಜ್ವಲ್ ರೇವಣ್ಣರನ್ನ SIT ಕಚೇರಿಗೆ ಜೀಪ್​ನಲ್ಲಿ ಕರೆತಂದಿದ್ದು ಮಹಿಳಾ ಅಧಿಕಾರಿಗಳು. ಹೌದು, ಪ್ರಜ್ವಲ್ ರೇವಣ್ಣ ಅವರು ಇದ್ದ ಜೀಪ್​ನಲ್ಲಿ ಚಾಲಕ ಹೊರತು ಪಡಿಸಿದರೆ ಉಳಿದ ಐವರು ಮಹಿಳಾ ಅಧಿಕಾರಿಗಳೆ ಇದ್ದರು. ಜೀಪ್​ನಲ್ಲಿ ಮಹಿಳಾ ಸಿಬ್ಬಂದಿ ಇದ್ದದ್ದು ಯಾಕೆ? ಎಂಬ ಪ್ರಶ್ನೆ ಮೂಡಿದೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತ ಮಹಿಳೆಯರು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ ಹೀಗಾಗಿ ದೌರ್ಜನ್ಯಕ್ಕೆ ಒಳಗಾದವರು ಹೆದರದೆ ಬಂದು ದೂರು ಕೊಡಿ ಎಂದು ಸಂದೇಶ ರವಾನಿಸಲು ಮಹಿಳಾ ಸಿಬ್ಬಂದಿ ಎಸ್​ಐಟಿ ಕಚೇರಿಗೆ ಕರೆತಂದ್ರಾ ಎಂಬ ಪ್ರಶ್ನೆ ಮೂಡಿದೆ.

ಇದನ್ನೂ ಓದಿ: ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ: ಹೇಗಿರಲಿದೆ ತನಿಖೆ? ಎಸ್​ಐಟಿ ತನಿಖಾ ಹಂತಗಳ ಬಗ್ಗೆ ಇಲ್ಲಿದೆ ಮಾಹಿತಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:32 am, Fri, 31 May 24

Follow us
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ
ರಾಹುಲ್ ಮಾತಾಡುವಾಗ ಮೈಕ್ ಆಫ್ ಮಾಡಲಾಯಿತೆಂಬ ಆರೋಪ ಸುಳ್ಳು: ಶೋಭಾ ಕರಂದ್ಲಾಜೆ
ರಾಹುಲ್ ಮಾತಾಡುವಾಗ ಮೈಕ್ ಆಫ್ ಮಾಡಲಾಯಿತೆಂಬ ಆರೋಪ ಸುಳ್ಳು: ಶೋಭಾ ಕರಂದ್ಲಾಜೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್