PM Modi in Shivamogga: ಪ್ರಧಾನಿ ನರೇಂದ್ರ ಮೋದಿಯವರನ್ನು ನೋಡಲು ಸಾಗರೋಪಾದಿಯಲ್ಲಿ ಹರಿದು ಬರುತ್ತಿರುವ ಜನ

ಅರುಣ್​ ಕುಮಾರ್​ ಬೆಳ್ಳಿ

Updated on: Feb 27, 2023 | 12:34 PM

ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ನಮ್ಮೆಲ್ಲರಿಗೆ ಗೊತ್ತಿರುವ ಸಂಗತಿ. ವಿದೇಶಗಳಲ್ಲೂ ಅವರು ಸೂಜಿಗಲ್ಲಿನಂತೆ ಜನರನ್ನು ಸೆಳೆಯುತ್ತಾರೆ.

ಶಿವಮೊಗ್ಗ: ಇದು ಯಾವುದೋ ದೊಡ್ಡ ಜಾತ್ರೆ ಅಥವಾ ರಥೋತ್ಸವದ ದೃಶ್ವವಲ್ಲ ಮಾರಾಯ್ರೇ. ಇಂದು ಶಿವಮೊಗ್ಗಗೆ (Shivamogga) ಆಗಮಿಸಿರುವ ಪ್ರಧಾನ ಮಂತ್ರಿ ನರೇಂದರ ಮೋದಿಯವರನ್ನು (PM Narendra Modi) ನೋಡಲು ಹರಿದು ಬಂದಿರುವ ಜನಸಾಗರ. ಅತ್ತ ನೋಡಿದರೂ ಜನ ಇತ್ತ ನೋಡಿದರೂ ಜನ, ಜನವೋ ಜನ! ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ನಮ್ಮೆಲ್ಲರಿಗೆ ಗೊತ್ತಿರುವ ಸಂಗತಿ. ವಿದೇಶಗಳಲ್ಲೂ (foreign countries) ಅವರು ಸೂಜಿಗಲ್ಲಿನಂತೆ ಜನರನ್ನು ಸೆಳೆಯುತ್ತಾರೆ. ಶಿವಮೊಗ್ಗ ವಿಮಾನ ನಿಲ್ದಾಣದ ಬಳಿ ಬರುತ್ತ್ತಿರುವ ಜನರ ಸಂಖ್ಯೆ ಹೆಚ್ಚುತ್ತಲೇ ಇರುವುದರಿಂದ ಎಷ್ಟು ಜನ ಸೇರಿರಬಹುದೆಂದು ಈಗಲೇ ಅಂದಾಜಿಸುವುದು ಸಾದ್ಯವಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 27, 2023 12:33 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.