ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಅಂತಿಮ ದರ್ಶನಕ್ಕೆ ಮುಸಲ್ಮಾನರೂ ಸೇರಿದಂತೆ ಎಲ್ಲ ಧರ್ಮ-ಜಾತಿಗಳ ಜನ ಆಗಮಿಸುತ್ತಿದ್ದಾರೆ

ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಅಂತಿಮ ದರ್ಶನಕ್ಕೆ ಮುಸಲ್ಮಾನರೂ ಸೇರಿದಂತೆ ಎಲ್ಲ ಧರ್ಮ-ಜಾತಿಗಳ ಜನ ಆಗಮಿಸುತ್ತಿದ್ದಾರೆ

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Jan 03, 2023 | 11:03 AM

ತಮ್ಮ ಸರಳ ಬದುಕು ಹಾಗೂ ಅಪಾರ ಜ್ಞಾನದಿಂದ ನಡೆದಾಡುವ ದೇವರು ಎಂದು ಕರೆಸಿಕೊಳ್ಳುತ್ತಿದ್ದ ಸ್ವಾಮೀಜಿ ಯಾವತ್ತೂ ಜಾತಿ-ಧರ್ಮಗಳ ನಡುವೆ ತಾರತಮ್ಯ ಮಾಡಿದವರಲ್ಲ,

ವಿಜಯಪುರ: ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ (Sri Siddeshwara Swamiji) ಕಳೆದ ರಾತ್ರಿ ಲಿಂಗೈಕ್ಯರಾಗಿದ್ದಾರೆ. ಅವರ ಅಂತಿಮ ದರ್ಶನ ಪಡೆಯಲು ರಾಜ್ಯದ ನಾನಾಭಾಗಗಳಿಂದ ಭಕ್ತಸಾಗರ ಹರಿದುಬರುತ್ತಿದೆ. ತಮ್ಮ ಸರಳ ಬದುಕು (simple living) ಹಾಗೂ ಅಪಾರ ಜ್ಞಾನದಿಂದ ನಡೆದಾಡುವ ದೇವರು ಎಂದು ಕರೆಸಿಕೊಳ್ಳುತ್ತಿದ್ದ ಸ್ವಾಮೀಜಿ ಯಾವತ್ತೂ ಜಾತಿ-ಧರ್ಮಗಳ ನಡುವೆ ತಾರತಮ್ಯ ಮಾಡಿದವರಲ್ಲ. ತಮ್ಮ ಪ್ರವಚನ (discourse) ಕೇಳಲು ಬಂದವರಿಗೆಲ್ಲ ಹರಸಿ, ಆಶೀರ್ವದಿಸಿ ಕಳಿಸುತ್ತಿದ್ದರು. ಮುಸ್ಲಿಂ ಸಮುದಾಯದ ವ್ಯಕ್ತಿಯೊಬ್ಬರು ಟಿವಿ9 ಕನ್ನಡ ವಾಹಿನಿ ವರದಿಗಾರನೊಂದಿಗೆ ಅದನ್ನೇ ಹೇಳುತ್ತಿದ್ದಾರೆ. ಅವರು ಹೇಳುವುದನ್ನು ಕೇಳಿಸಿಕೊಳ್ಳಿ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ