Dr G Parameshwar; ಜನ ನಮ್ಮ ಮೇಲೆ ದೊಡ್ಡ ನಿರೀಕ್ಷೆ ಇಟ್ಟುಕೊಂಡಿದ್ದಾರೆ, ಅದನ್ನು ನೆರವೇರಿಸುವ ಗುರುತರ ಜವಾಬ್ದಾರಿ ನಮ್ಮ ಮೇಲಿದೆ: ಜಿ ಪರಮೇಶ್ವರ್

ಅರುಣ್​ ಕುಮಾರ್​ ಬೆಳ್ಳಿ

Updated on: May 20, 2023 | 11:43 AM

ತಮ್ಮಲ್ಲಿರುವ ಚಿಕ್ಕಪುಟ್ಟ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಜನರಿಗೆ ನೀಡಿರುವ ಗ್ಯಾರೆಂಟಿಗಳನ್ನು ಅನುಷ್ಠಾನಗೊಳಿಸುವ ಜವಾಬ್ದಾರಿ ಮತ್ತು ಸವಾಲು ಸರ್ಕಾರದ ಮುಂದಿದೆ ಎಂದ ಪರಮೇಶ್ವರ್ ಹೇಳಿದರು.

ಬೆಂಗಳೂರು: ಮುಖ್ಯಮಂತ್ರಿ, ಉಪ-ಮುಖ್ಯಮಂತ್ರಿಯವರರೊಂದಿಗೆ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಡಾ ಜಿ ಪರಮೇಶ್ವರ್ (Dr G Parameshwar) ಅವರು ಟಿವಿ9 ಕನ್ನಡ ವಾಹಿನಿಯೊಂದಿಗೆ ಮಾತಾಡುತ್ತಾ, ಉಪ-ಮುಖ್ಯಮಂತ್ರಿ ಸ್ಥಾನ ಸಿಗದಿರುವುದಕ್ಕೆ ಬೇಸರವಿಲ್ಲ, ಪಕ್ಷದ ಹೈಕಮಾಂಡ್ (high command) ನೀಡುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವುದಾಗಿ ಹೇಳಿದರು. ಸಚಿವ ಸ್ಥಾನಕ್ಕೆ ತಮ್ಮನ್ನು ಪರಿಗಣಿಸಿದ ಹೈಕಮಾಂಡ್ ಮತ್ತು ರಾಜ್ಯದ ನಾಯಕರಿಗೆ (state leaders) ಕೃತಜ್ಞತೆಗಳನ್ನು ಸಲ್ಲಿಸಿದ ಅವರು ಜನರು ಹೊಸ ಸರ್ಕಾರದ ಮೇಲೆ ತುಂಬಾ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ತಮ್ಮಲ್ಲಿರುವ ಚಿಕ್ಕಪುಟ್ಟ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಅವರಿಗೆ ನೀಡಿರುವ ಗ್ಯಾರೆಂಟಿಗಳನ್ನು ಅನುಷ್ಠಾನಗೊಳಿಸುವ ಜವಾಬ್ದಾರಿ ಮತ್ತು ಸವಾಲು ಸರ್ಕಾರದ ಮುಂದಿದೆ ಎಂದ ಪರಮೇಶ್ವರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.