ಜನ ಸಿದ್ದರಾಮಯ್ಯನವರ ಕಾರ್ಯಕ್ರಮಗಳನ್ನು ನೆನಪಿಸಿಕೊಳ್ಳುತ್ತಿದ್ದಾರೆ, ಮುಖ್ಯಮಂತ್ರಿ ಆಯ್ಕೆ ವಿಷಯ ಹೈಕಮಾಂಡ್ ಗೆ ಬಿಟ್ಟಿದ್ದು: ಜಮೀರ್ ಅಹ್ಮದ್

ಜನ ಸಿದ್ದರಾಮಯ್ಯನವರ ಕಾರ್ಯಕ್ರಮಗಳನ್ನು ನೆನಪಿಸಿಕೊಳ್ಳುತ್ತಿದ್ದಾರೆ, ಮುಖ್ಯಮಂತ್ರಿ ಆಯ್ಕೆ ವಿಷಯ ಹೈಕಮಾಂಡ್ ಗೆ ಬಿಟ್ಟಿದ್ದು: ಜಮೀರ್ ಅಹ್ಮದ್

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Oct 21, 2022 | 3:30 PM

ಮುಖ್ಯಮಂತ್ರಿ ಯಾರಾಗಬೇಕೆಂದು ಬಯಸುತ್ತೀರಿ ಅಂತ ಮಾಧ್ಯಮದವರು ಕೇಳಿದ್ದಕ್ಕೆ ಜಮೀರ್, ಅದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಹೇಳಿ ಜಾರಿಕೊಂಡರು.

ಹುಬ್ಬಳ್ಳಿ:  ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಸಿದ್ದರಾರಮಯನವರೇ ಮುಖ್ಯಮಂತ್ರಿಯಾಗಿ ಜನ ಬಯಸುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ (Zameer Ahmed Khan) ತಮ್ಮ ಮನದಲ್ಲಿರುವುದನ್ನು ಜನರ ಮೇಲೆ ಹಾಕಿ ಹೇಳಿದರು. ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತಾಡಿದ ಜಮೀರ್, ತಾನು ಪ್ರವಾಸ ಮಾಡಿರುವ ಕಡೆಯೆಲ್ಲ ಜನ ಸಿದ್ದರಾಮಯ್ಯ (Siddaramaiah) ಮುಖ್ಯಮಂತ್ರಿಯಾಗಿದ್ದಾಗ ನೀಡಿದ ಕಾರ್ಯಕ್ರಮಗಳನ್ನು ನೆನಪಿಸಿಕೊಳ್ಳುತ್ತಿದ್ದ್ದಾರೆ, ಹಾಗಾಗಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷ (Congress Party) ಅಧಿಕಾರಕ್ಕೆ ಬರಬೇಕೆನ್ನುವುದನ್ನು ಅವರು ಬಯಸುತ್ತಿದ್ದಾರೆ ಅಂತ ಜಮೀರ್ ಹೇಳಿದರು. ಮುಖ್ಯಮಂತ್ರಿ ಯಾರಾಗಬೇಕೆಂದು ಬಯಸುತ್ತೀರಿ ಅಂತ ಮಾಧ್ಯಮದವರು ಕೇಳಿದ್ದಕ್ಕೆ ಜಮೀರ್, ಅದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಹೇಳಿ ಜಾರಿಕೊಂಡರು.