ಬಳ್ಳಾರಿಯ ಕಾರ್ಯಕ್ರಮವೊಂದರಲ್ಲಿ ಸಿದ್ದರಾಮಯ್ಯ ನಾಗೇಂದ್ರ ಅನ್ನುತ್ತಿದ್ದಂತೆ ಜನ ‘ಮಿನಿಸ್ಟ್ರು ನಾಗೇಂದ್ರ’ ಎಂದರು!

ಅರುಣ್​ ಕುಮಾರ್​ ಬೆಳ್ಳಿ

Updated on: Nov 27, 2024 | 8:09 PM

ವಾಲ್ಮೀಕಿ ಅಭಿವೃದ್ಧಿ ನಿಗಮ ಬಹುಕೋಟಿ ಹಗರಣದಲ್ಲಿ ಪ್ರಮುಖ ಅರೋಪಿಯಾಗಿ ಜೈಲು ಸೇರಿದ್ದ ನಾಗೇಂದ್ರ ಸಿದ್ದರಾಮಯ್ಯ ಸಂಪುಟದಲ್ಲಿ ಯುವಜನ ಸೇವೆ ಮತ್ತು ಕ್ರೀಡೆ ಹಾಗೂ ಪರಿಶಿಷ್ಟ ಪಂಗಡ ಇಲಾಖೆ ಸಚಿವರಾಗಿದ್ದರು. ಹಗರಣದಲ್ಲಿ ಅವರಿಗೆ ಕ್ಲೀನ್ ಚಿಟ್ ಸಿಕ್ಕಿರುವುದರಿಂದ ಪುನಃ ಮಂತ್ರಿಮಂಡಲಕ್ಕೆ ಸೇರಿಸಿಕೊಳ್ಳುವ ಕೂಗು ವಿಶೇಷವಾಗಿ ಬಳ್ಳಾರಿಯಲ್ಲಿ ಕೇಳಿಬರುತ್ತಿದೆ.

ಬಳ್ಳಾರಿ: ನಗರದ ಆರೋಗ್ಯ ಮಾತೆ ಅಮೃತಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಭಾಷಣ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವೇದಿಕೆ ಮೇಲೆ ನೆರೆದಿದ್ದ ಗಣ್ಯರ ಹೆಸರಗಳನ್ನು ಸಲ್ಯೂಟೇಶನ್ ಗಾಗಿ ಉಲ್ಲೇಖಿಸುವಾಗ ಮಾಜಿ ಸಚಿವ ಹಾಗೂ ಶಾಸಕ ಬಿ ನಾಗೇಂದ್ರ ಹೆಸರು ಹೇಳುತ್ತಿದ್ದಂತೆಯೇ ಜನರೆಲ್ಲ ಮಿನಿಸ್ಟ್ರು ನಾಗೇಂದ್ರ ಅಂತ ಜೋರಾಗಿ ಕಿರುಚಿದರು. ಸಿದ್ದರಾಮಯ್ಯ ಕಿರುಚಿದವರ ಕಡೆ ನೋಡಿದಾಗ ಅವರ ಹಿಂದೆ ನಿಂತಿದ್ದ ನಾಗೇಂದ್ರ ಮತ್ತು ಬಳ್ಳಾರಿ ಶಾಸಕ ಭರತ್ ರೆಡ್ಡಿ ಸುಮ್ಮನಿರುವಂತೆ ಜನರತ್ತ ಕೈ ಸನ್ನೆ ಮಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಮುಡಾ ಹಗರಣ: ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಸಿವಿಲ್​ ಕೇಸ್​

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.