AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಮಂದಿರ ಉದ್ಘಾಟನೆ ವಿಷಯದಲ್ಲಿ ಕಾಂಗ್ರೆಸ್ ಮಾಡುತ್ತಿರುವ ರಾಜಕಾರಣ ಜನರಿಗೆ ಅರ್ಥವಾಗುತ್ತಿದೆ: ಪ್ರಲ್ಹಾದ್ ಜೋಶಿ, ಕೇಂದ್ರ ಸಚಿವ

ರಾಮಮಂದಿರ ಉದ್ಘಾಟನೆ ವಿಷಯದಲ್ಲಿ ಕಾಂಗ್ರೆಸ್ ಮಾಡುತ್ತಿರುವ ರಾಜಕಾರಣ ಜನರಿಗೆ ಅರ್ಥವಾಗುತ್ತಿದೆ: ಪ್ರಲ್ಹಾದ್ ಜೋಶಿ, ಕೇಂದ್ರ ಸಚಿವ

ಅರುಣ್​ ಕುಮಾರ್​ ಬೆಳ್ಳಿ
|

Updated on: Jan 15, 2024 | 1:40 PM

ಒಂದು ವರ್ಗದ ವೋಟುಗಳನ್ನು ಕಳೆದುಕೊಳ್ಳ್ಳುವ ಭೀತಿಯಲ್ಲಿರುವ ಕಾಂಗ್ರೆಸ್ ನಾಯಕರು ಆಹ್ವಾನವನ್ನು ತಿರಸ್ಕರಿಸಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಇಂಥ ಬೇಜವಾಬ್ದಾರಿತನ ತೋರಬಾರದು. ಈ ವಿಷಯದಲ್ಲಿ ಯಾರು ರಾಜಕಾರಣ ಮಾಡುತ್ತಿದ್ದಾರೆ ಅಂತ ದೇಶದ ಜನ ಅರ್ಥಮಾಡಿಕೊಂಡಿದ್ದಾರೆ ಎಂದು ಜೋಶಿ ಹೇಳಿದರು.

ಹುಬ್ಬಳ್ಳಿ: ನಗರಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Union Minister Pralhad Joshi), ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳನ್ನು ಕೋರಿದರು. ಮುಂದುವರಿದು ಮಾತಾಡಿದ ಅವರು ದೇಶದೆಲ್ಲೆಡೆ ರಾಮಮಂದಿರ ಉದ್ಘಾಟನೆಯ (Ram Mandir inauguration) ದಿನ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಸಂಭ್ರಮ ಸಡಗರ ಮನೆಮಾಡಿದ್ದು, ನಿಮ್ಮ ಹತ್ತಿರದ ದೇವಸ್ಥಾನಗಳ ಸ್ಚಚ್ಛಗೊಳಿಸುವ ಕೆಲಸದಲ್ಲಿ ತೊಡಗಿಸಿಕೊಳ್ಳಿ ಅಂತ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ಕರೆ ನೀಡಿರುವುದಿಂದ ಅದಕ್ಕೋಸ್ಕರ ತಾನು, ಶಾಸಕ ಮಹೇಶ್ ಟೆಂಗಿನಕಾಯಿ ಮತ್ತು ಕಾರ್ಯಕರ್ತರೆಲ್ಲ ಜೊತೆಗೂಡಿದ್ದೇವೆ ಎಂದು ಹೇಳಿದರು. ರಾಮಮಂದಿರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗಿಯಾಗಲ್ಲ ಎಂದು ಕಾಂಗ್ರೆಸ್ ಹೇಳಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜೋಶಿ, ಉದ್ಘಾಟನೆಗೆ ಹೋದರೆ, ಒಂದು ವರ್ಗದ ವೋಟುಗಳನ್ನು ಕಳೆದುಕೊಳ್ಳ್ಳುವ ಭೀತಿಯಲ್ಲಿರುವ ಕಾಂಗ್ರೆಸ್ ನಾಯಕರು ಆಹ್ವಾನವನ್ನು ತಿರಸ್ಕರಿಸಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಇಂಥ ಬೇಜವಾಬ್ದಾರಿತನ ತೋರಬಾರದು. ಈ ವಿಷಯದಲ್ಲಿ ಯಾರು ರಾಜಕಾರಣ ಮಾಡುತ್ತಿದ್ದಾರೆ ಅಂತ ದೇಶದ ಜನ ಅರ್ಥಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ