ಲಾರಿ ಪಲ್ಟಿಯಾಗುತ್ತಿದ್ದಂತೆ ಕೆಳಗೆ ಬಿದ್ದ ಕೂಲ್ ಡ್ರಿಂಕ್ಸ್​ ಬಾಟಲಿಗಳನ್ನು ದೋಚಿದ ಜನ!

Updated on: Mar 19, 2026 | 11:09 PM

ನೆಲ್ಲೂರು ಜಿಲ್ಲೆಯಲ್ಲಿ ಅಪಘಾತಕ್ಕೀಡಾದ ಲಾರಿಯಿಂದ ಕೂಲ್ ಡ್ರಿಂಕ್ಸ್ ಬಾಟಲಿಗಳು ರಸ್ತೆಯಲ್ಲಿ ಬಿದ್ದಿತ್ತು. ಕೂಡಲೆ ಓಡೋಡಿ ಬಂದ ಸುತ್ತಮುತ್ತಲಿನ ಮನೆಯ ಜನರು ಕೈಗೆ ಸಿಕ್ಕಷ್ಟು ಆ ಕೂಲ್ ಡ್ರಿಂಕ್ಸ್ ಬಾಟಲಿಗಳನ್ನು ದೋಚಿಕೊಂಡು ಹೋಗಿದ್ದಾರೆ. ಹಲವಾರು ಜನರು ರಸ್ತೆಯಲ್ಲಿ ಬಿದ್ದ ತಂಪು ಪಾನೀಯದ ಬಾಟಲಿಗಳನ್ನು ಹೆಕ್ಕುತ್ತಿರುವ ವಿಡಿಯೋ ವೈರಲ್ ಆಗಿದೆ. ಲಾರಿ ಚಾಲಕ ಮತ್ತು ಕ್ಲೀನರ್ ಬಾಟಲಿಗಳನ್ನು ತೆಗೆದುಕೊಂಡು ಹೋಗದಂತೆ ಮನವಿ ಮಾಡಿದರೂ, ಜನರು ಕೇಳಲಿಲ್ಲ.

ಹೈದರಾಬಾದ್, ಮಾರ್ಚ್ 19: ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಅಪಘಾತಕ್ಕೀಡಾದ ಲಾರಿಯಿಂದ ಕೂಲ್ ಡ್ರಿಂಕ್ಸ್ ಬಾಟಲಿಗಳು ರಸ್ತೆಯಲ್ಲಿ ಬಿದ್ದಿತ್ತು. ಕೂಡಲೆ ಓಡೋಡಿ ಬಂದ ಸುತ್ತಮುತ್ತಲಿನ ಮನೆಯ ಜನರು ಕೈಗೆ ಸಿಕ್ಕಷ್ಟು ಆ ಕೂಲ್ ಡ್ರಿಂಕ್ಸ್ ಬಾಟಲಿಗಳನ್ನು ದೋಚಿಕೊಂಡು ಹೋಗಿದ್ದಾರೆ. ಹಲವಾರು ಜನರು ರಸ್ತೆಯಲ್ಲಿ ಬಿದ್ದ ತಂಪು ಪಾನೀಯದ ಬಾಟಲಿಗಳನ್ನು ಹೆಕ್ಕುತ್ತಿರುವ ವಿಡಿಯೋ ವೈರಲ್ ಆಗಿದೆ. ಲಾರಿ ಚಾಲಕ ಮತ್ತು ಕ್ಲೀನರ್ ಬಾಟಲಿಗಳನ್ನು ತೆಗೆದುಕೊಂಡು ಹೋಗದಂತೆ ಮನವಿ ಮಾಡಿದರೂ, ಜನರು ಕೇಳಲಿಲ್ಲ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಗುಂಪನ್ನು ಚದುರಿಸಿದರು.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More