AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಪಿಎಲ್ ಕಾರ್ಡುದಾರರು ಸಹ ಗೃಹಲಕ್ಷ್ಮಿ ಯೋಜನೆಗೆ ಅರ್ಹರು, ಚಿಂತಿಸುವ ಅಗತ್ಯವಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

ಎಪಿಎಲ್ ಕಾರ್ಡುದಾರರು ಸಹ ಗೃಹಲಕ್ಷ್ಮಿ ಯೋಜನೆಗೆ ಅರ್ಹರು, ಚಿಂತಿಸುವ ಅಗತ್ಯವಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Nov 20, 2024 | 4:31 PM

Share

ಬಿಮ್ಸ್ ನಲ್ಲಿ ವೈದ್ಯರ ನಿರ್ಲಕ್ಷ್ಯ ಕಾರಣಕ್ಕೆ ಬಾಣಂತಿಯೊಬ್ಬರು ಸಾವನ್ನಪ್ಪಿರುವುದಕ್ಕೆ ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಸ್ಪತ್ರೆಯಲ್ಲಿ ಆಡಳಿತ ವ್ಯವಸ್ಥೆ ಹದಗೆಟ್ಟಿದೆ, ಎಲ್ಲವನ್ನೂ ಸರಿಮಾಡುವ ಅವಶ್ಯಕತೆಯಿದೆ, ಈಗಾಗಲೇ ಒಮ್ಮೆ ಬಿಮ್ಸ್ ಗೆ ಭೇಟಿ ನೀಡಿರುವೆ, ಮತ್ತೊಮ್ಮೆ ಹೋಗುವುದಾಗಿ ಹೇಳಿದರು.

ಬೆಳಗಾವಿ: ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಸುಮಾರು 80,000 ಬಿಪಿಎಲ್ ಕಾರ್ಡ್​ಗಳನ್ನು ಎಪಿಎಲ್ ಕಾರ್ಡ್​ಗಳಾಗಿ ಪರಿಷ್ಕರಿಸಲಾಗಿದ್ದರೂ ಪರಿಷ್ಕೃತ ಎಪಿಎಲ್ ಕಾರ್ಡುದಾರರು ಗೃಹಲಕ್ಷ್ಮಿ ಫಲಾನುಭವಿಗಳಾಗಿದ್ದರೆ ಆತಂಕಿತರಾಗುವ ಕಾರಣವಿಲ್ಲ, ಯಾಕೆಂದರೆ ಗೃಹಲಕ್ಷ್ಮಿ ಯೋಜನೆಗೆ ಬಿಪಿಎಲ್ ಕಾರ್ಡುದಾರರ ಜೊತೆ ಎಪಿಎಲ್ ಕಾರ್ಡುದಾರರು ಕೂಡ ಅರ್ಹರು ಎಂದು ಹೇಳಿದರು

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬಿಪಿಎಲ್​ ಬೆನ್ನಲ್ಲೇ ಕಾರ್ಮಿಕರ ಕಾರ್ಡಿಗೂ ಕತ್ತರಿ: ಬರೋಬ್ಬರಿ 2.46 ಲಕ್ಷ ಕಾರ್ಮಿಕರ ಕಾರ್ಡ್‌ ಅಮಾನತು

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.