ಮುಡಾ ಪ್ರಕರಣ: ತನಿಖೆ ಮುಂದುವರಿಸಿ ಅಂತಿಮ ವರದಿ ಸಲ್ಲಿಸುವಂತೆ ಲೋಕಾಯುಕ್ತಗೆ ಕೋರ್ಟ್ ಸೂಚನೆ
ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ರಕ್ಷಿಸಲು ಲೋಕಾಯುಕ್ತ ಪೊಲೀಸರು ತನಿಖೆಯನ್ನು ಪೂರ್ಣಗೊಳಿಸದೆ ಬಿ ರಿಪೋರ್ಟ್ ಅನ್ನು ಕೋರ್ಟ್ಗೆ ಸಲ್ಲಿಸಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಹೇಳಿದ್ದಾರೆ. ತನಿಖೆಯನ್ನು ಮುಂದುವರಿಸಿ ಅಂತಿಮ ವರದಿಯನ್ನು ಸಲ್ಲಿಸುವಂತೆ ಕೋರ್ಟ್ ಲೋಕಾಯುಕ್ತ ಪೊಲೀಸರಿಗೆ ಹೇಳಿದೆ ಎಂದು ಸಾಮಾಜಿಕ ಕಾರ್ಯಕರ್ತ ಕೃಷ್ಣ ಮಾಧ್ಯಮಗಳಿಗೆ ಹೇಳಿದ್ದಾರೆ.
ಬೆಂಗಳೂರು, ಏಪ್ರಿಲ್ 15: ಮುಡಾ ಪ್ರಕರಣ ಸಿಎಂ ಸಿದ್ದರಾಮಯ್ಯನವರ ಬೆನ್ನು ಬಿಡುತ್ತಿಲ್ಲ. ಆದರೆ ಜನಪ್ರತಿನಿಧಿಗಳ ಕೋರ್ಟ್ ನಿಂದ (people’s representatives court) ಅವರಿಗೆ ಕೆಲ ದಿನಗಳ ಮಟ್ಟಿನ ನಿರಾಳತೆಯಂತೂ ಸಿಕ್ಕಿದೆ. ಲೋಕಾಯುಕ್ತ ಪೊಲೀಸರು ಮುಡಾ ಪ್ರಕರಣದಲ್ಲಿ ಬಿ ರಿಪೋರ್ಟ್ ಸಲ್ಲಿಸಿದ್ದನ್ನು ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಅವರು ತಕರಾರು ಅರ್ಜಿಯನ್ನು ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಪ್ರಕರಣದ ತನಿಖೆ ಮುಂದುವರಿಸಿ ಮೇ 7 ರ ಒಳಗಾಗಿ ವಿಸ್ತೃತ ಮತ್ತು ಅಂತಿಮ ವರದಿ ಸಲ್ಲಿಸುವಂತೆ ಲೋಕಾಯಕ್ತ ಪೊಲೀಸ್ ಗೆ ಸೂಚನೆ ನೀಡಿದೆ. ವರದಿ ಸಲ್ಲಿಕೆಯಾದ ಬಳಿಕ ಲೋಕಾಯುಕ್ತ ಈ ಮೊದಲು ಸಲ್ಲಿಸಿದ ಬಿ ರಿಪೋರ್ಟ್ ಅನ್ನು ಕೈಗೆತ್ತಿಕೊಳ್ಳುವುದಾಗಿ ಕೋರ್ಟ್ ಹೇಳಿದೆ.
ಇದನ್ನೂ ಓದಿ: ಮುಡಾ ಹಗರಣ: ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ಸ್ನೇಹಮಯಿ ಕೃಷ್ಣ ಕೇಂದ್ರಕ್ಕೆ ದೂರು
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು

‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ

‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ

ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
