ಮುಡಾ ಪ್ರಕರಣ: ತನಿಖೆ ಮುಂದುವರಿಸಿ ಅಂತಿಮ ವರದಿ ಸಲ್ಲಿಸುವಂತೆ ಲೋಕಾಯುಕ್ತಗೆ ಕೋರ್ಟ್​ ಸೂಚನೆ

ಅರುಣ್​ ಕುಮಾರ್​ ಬೆಳ್ಳಿ

Updated on: Apr 15, 2025 | 9:46 PM

ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ರಕ್ಷಿಸಲು ಲೋಕಾಯುಕ್ತ ಪೊಲೀಸರು ತನಿಖೆಯನ್ನು ಪೂರ್ಣಗೊಳಿಸದೆ ಬಿ ರಿಪೋರ್ಟ್ ಅನ್ನು ಕೋರ್ಟ್​ಗೆ ಸಲ್ಲಿಸಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಹೇಳಿದ್ದಾರೆ. ತನಿಖೆಯನ್ನು ಮುಂದುವರಿಸಿ ಅಂತಿಮ ವರದಿಯನ್ನು ಸಲ್ಲಿಸುವಂತೆ ಕೋರ್ಟ್ ಲೋಕಾಯುಕ್ತ ಪೊಲೀಸರಿಗೆ ಹೇಳಿದೆ ಎಂದು ಸಾಮಾಜಿಕ ಕಾರ್ಯಕರ್ತ ಕೃಷ್ಣ ಮಾಧ್ಯಮಗಳಿಗೆ ಹೇಳಿದ್ದಾರೆ.

ಬೆಂಗಳೂರು, ಏಪ್ರಿಲ್ 15: ಮುಡಾ ಪ್ರಕರಣ ಸಿಎಂ ಸಿದ್ದರಾಮಯ್ಯನವರ ಬೆನ್ನು ಬಿಡುತ್ತಿಲ್ಲ. ಆದರೆ ಜನಪ್ರತಿನಿಧಿಗಳ ಕೋರ್ಟ್ ನಿಂದ (people’s representatives court) ಅವರಿಗೆ ಕೆಲ ದಿನಗಳ ಮಟ್ಟಿನ ನಿರಾಳತೆಯಂತೂ ಸಿಕ್ಕಿದೆ. ಲೋಕಾಯುಕ್ತ ಪೊಲೀಸರು ಮುಡಾ ಪ್ರಕರಣದಲ್ಲಿ ಬಿ ರಿಪೋರ್ಟ್ ಸಲ್ಲಿಸಿದ್ದನ್ನು ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಅವರು ತಕರಾರು ಅರ್ಜಿಯನ್ನು ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಪ್ರಕರಣದ ತನಿಖೆ ಮುಂದುವರಿಸಿ ಮೇ 7 ರ ಒಳಗಾಗಿ ವಿಸ್ತೃತ ಮತ್ತು ಅಂತಿಮ ವರದಿ ಸಲ್ಲಿಸುವಂತೆ ಲೋಕಾಯಕ್ತ ಪೊಲೀಸ್ ಗೆ ಸೂಚನೆ ನೀಡಿದೆ. ವರದಿ ಸಲ್ಲಿಕೆಯಾದ ಬಳಿಕ ಲೋಕಾಯುಕ್ತ ಈ ಮೊದಲು ಸಲ್ಲಿಸಿದ ಬಿ ರಿಪೋರ್ಟ್ ಅನ್ನು ಕೈಗೆತ್ತಿಕೊಳ್ಳುವುದಾಗಿ ಕೋರ್ಟ್​ ಹೇಳಿದೆ.

ಇದನ್ನೂ ಓದಿ:    ಮುಡಾ ಹಗರಣ: ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ಸ್ನೇಹಮಯಿ ಕೃಷ್ಣ ಕೇಂದ್ರಕ್ಕೆ ದೂರು

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.