ದೇಶಕ್ಕೆ ಅನ್ನ ನೀಡುವ ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ

Edited By:

Updated on: May 18, 2026 | 2:48 PM

ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ಕಚ್ಚಾ ತೈಲ ಬೆಲೆ ಏರಿಕೆ, ವಿದೇಶಿ ವಿನಿಮಮ ಕೊರತೆ ಸೇರಿದಂತೆ ಹಲವು ಆರ್ಥಿಕ ಸಂಕಷ್ಟಗಳು ಎದುರಾಗಿದೆ. ಪರಿಣಾಮ ಭಾರತದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಾಗಿದೆ. ಇದರ ಬೆನ್ನಲ್ಲೇ ಅಗತ್ಯ ವಸ್ತಗಳು ಬೆಲೆ ಹೆಚ್ಚಳವಾಗುತ್ತಿದೆ. ಹೌದು...ಈಗಾಗಲೇ ಖಾಸಗಿ ಬಸ್, ಸ್ಕೂಲ್ ಬಸ್, ದಿನಸಿ ಸೇರಿದಂತೆ ಅಗತ್ಯ ವಸ್ತುಗಳ ದರ ಏರಿಯಾಗುತ್ತಿದ್ದು, ಇದೀಗ ತೈಲ ಬೆಲೆ ಏರಿಕೆ ಬಿಸಿ ಅನ್ನದಾತರಿಗೂ ತಟ್ಟಿದೆ.

ಬೀದರ್, (ಮೇ 18): ಈಗಿನ ತಂತ್ರಜ್ಞಾನ ಕಾಲದಲ್ಲಿ ಕೃಷಿ ಪ್ರಧಾನ ದೇಶ ಭಾರತದಲ್ಲಿ ರೈತರು ಎತ್ತುಗಳಿಂದ ಉಳಿಮೆ ಮಾಡುವುದನ್ನು ಕಡಿಮೆ ಮಾಡಿದ್ದಾರೆ. ಆಧುನಿಕತೆ ಭರಾಟೆಯಲ್ಲಿ ಎತ್ತುಗಳ ಸ್ಥಾನವನ್ನು ಯಂತ್ರಗಳು, ಟ್ರ್ಯಾಕ್ಟರಗಳು ಪಡೆದುಕೊಂಡಿವೆ. ಆದ್ರೆ, ಇದೀಗ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ (Petrol, Diesel Price Hike) ಹಿನ್ನೆಲೆಯಲ್ಲಿ ರೈತರು ಮತ್ತೆ ಎತ್ತುಗಳ ಮೊರೆ ಹೋಗುತ್ತಿದ್ದಾರೆ. ಹೌದು…ಯಂತ್ರೋಪಕರಣಗಳಿಂದ ಕೃಷಿ ಚಟುವಟಿಕೆ ಮಾಡುತ್ತಿದ್ದ ರೈತರಿಗೆ ತೈಲ ಬೆಲೆ ಬಿಸಿ ತಟ್ಟಿದ್ದು, ರೈತರು ಬಿತ್ತನೆ ಹೊಲ ಹದಗೊಳಿಸುವ ಯಂತ್ರದ ಬಾಡಿಕೆ ದರ ಹೆಚ್ಚಳವಾಗಿದೆ. ಹೀಗಾಗಿ ರೈತರು ಕೃಷಿ ಚಟುವಟಿಕೆಗೆ ಎತ್ತುಗಳನ್ನ ಖರೀದಿಸಲು ಮುಂದಾಗಿದ್ದಾರೆ. ಎತ್ತು ಖರೀದಿಸಲು ತೆಲಂಗಾಣ ಮಹಾರಾಷ್ಟ್ರ ಬೀದರ್ ನಿಂದ ಔರಾದ್ ನ APMC ಜಾನುವಾರು ಮಾರುಕಟ್ಟೆ ಬರುತ್ತಿದ್ದು, ಒಂದು ಜೋಡಿ ಎತ್ತು ಒಂದೂವರೆ ಲಕ್ಷದಿಂದ ನಾಲ್ಕು ಲಕ್ಷ ರೂ, ವರೆಗೆ ಮಾರಾಟವಾಗುತ್ತಿವೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published on: May 18, 2026 02:44 PM
Follow Us
Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More