ಪೆಟ್ರೋಲ್, ಡೀಸೆಲ್ ಖಾಲಿ ವದಂತಿ: ಚಾಮರಾಜನಗರ, ಕೊಳ್ಳೇಗಾಲದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ವಾಹನ ಸವಾರರು

Edited By:

Updated on: Mar 21, 2026 | 9:41 AM

ಎಲ್​ಪಿಜಿ ಗ್ಯಾಸ್ ರೀತಿ ಪೆಟ್ರೋಲ್, ಡೀಸೆಲ್​​ಗೂ ಕೊರತೆ ಉಂಟಾಗಲಿದೆ ಎಂಬ ವದಂತಿಯಿಂದ ಚಾಮರಾಜನಗರ ಹಾಗೂ ಕೊಳ್ಳೇಗಾಲದ ಪೆಟ್ರೋಲ್ ಬಂಕ್​​ಗಳಿಗೆ ಜನ ಮುಗಿಬಿದ್ದರು. ವದಂತಿಗಳನ್ನು ನಂಬಬಾರದು, ಅಗತ್ಯವಿರುವಷ್ಟೇ ಇಂಧನ ಖರೀದಿಸಬೇಕು ಎಂದು ಸ್ಥಳೀಯ ಆಡಳಿತ ಹಾಗೂ ಬಂಕ್ ಮಾಲೀಕರು ಮನವಿ ಮಾಡಿದರೂ ಜನ ಬಂಕ್​ಗಳತ್ತ ಧಾವಿಸಿದ್ದಾರೆ. ಪರಿಸ್ಥಿತಿ ಸಾಮಾನ್ಯವಾಗಿದ್ದು, ಇಂಧನ ಕೊರತೆ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಾಮರಾಜನಗರ, ಮಾರ್ಚ್ 21: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮದ ಆತಂಕ ನಡುವೆ ಚಾಮರಾಜನಗರ ಜಿಲ್ಲೆಯಲ್ಲಿ ಪೆಟ್ರೋಲ್ ಕೊರತೆ ವದಂತಿ ಭಾರೀ ಗೊಂದಲಕ್ಕೆ ಕಾರಣವಾಗಿದೆ. ಜಿಲ್ಲೆಯ ಚಾಮರಾಜನಗರ ಹಾಗೂ ಕೊಳ್ಳೇಗಾಲ ಪಟ್ಟಣಗಳಲ್ಲಿ ಪೆಟ್ರೋಲ್ ಸಿಗುವುದಿಲ್ಲ ಎಂಬ ವದಂತಿ ಹಬ್ಬಿದ್ದು, ವಾಹನ ಸವಾರರು ಏಕಾಏಕಿ ಪೆಟ್ರೋಲ್ ಬಂಕ್‌ಗಳತ್ತ ಮುಗಿಬಿದ್ದರು. ಇದರಿಂದ ಹಲವು ಬಂಕ್‌ಗಳಲ್ಲಿ ಉದ್ದ ಸಾಲುಗಳು ಕಂಡುಬಂದವು. ಗ್ಯಾಸ್ ಕೊರತೆಯಂತೆಯೇ ಪೆಟ್ರೋಲ್ ಹಾಗೂ ಡೀಸೆಲ್‌ಗೂ ಸಮಸ್ಯೆ ಉಂಟಾಗಬಹುದು ಎಂಬ ಭಯ ಜನರಲ್ಲಿ ಹೆಚ್ಚಾಗಿದ್ದು, ಮುಂಜಾಗ್ರತೆಯಾಗಿ ಹೆಚ್ಚಿನ ಪ್ರಮಾಣದಲ್ಲಿ ಇಂಧನ ಖರೀದಿಸಲು ಜನರು ಹರಸಾಹಸ ಪಟ್ಟರು. ಕೆಲವು ಕಡೆಗಳಲ್ಲಿ ವಾಹನಗಳ ದೀರ್ಘ ಸಾಲುಗಳು ಟ್ರಾಫಿಕ್ ಸಮಸ್ಯೆಯನ್ನೂ ಉಂಟುಮಾಡಿದವು.

ಬಂಕ್ ಸಿಬ್ಬಂದಿ, ‘ಪೆಟ್ರೋಲ್ ಹಾಗೂ ಡೀಸೆಲ್ ಸಾಕಷ್ಟು ಲಭ್ಯವಿದೆ, ಯಾವುದೇ ಕೊರತೆ ಇಲ್ಲ’ ಎಂದು ಸ್ಪಷ್ಟಪಡಿಸಿದ್ದರೂ, ಜನರು ಅದನ್ನು ನಂಬದೇ ಖರೀದಿಸಲು ಮುಂದಾದರು. ಇದರಿಂದ ಕೆಲ ಸಮಯ ತಾತ್ಕಾಲಿಕ ಗೊಂದಲದ ಪರಿಸ್ಥಿತಿ ನಿರ್ಮಾಣವಾಯಿತು.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
ಸೂರಜ್ ಪ್ರಸಾದ್ ಎಸ್.ಎನ್

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More