ಪಿಎಫ್ಐ ಸಂಘಟನೆಯನ್ನು ಯಾವಾಗ ಬ್ಯಾನ್ ಮಾಡುತ್ತೀರಿ ಅಂತ ಜನ ಕೇಳುತ್ತಿದ್ದ ಪ್ರಶ್ನೆಗೆ ಉತ್ತರ ಸಿಕ್ಕಿದೆ: ಬಸವರಾಜ ಬೊಮ್ಮಾಯಿ
ದೇಶದ ನಾನಾ ಭಾಗಗಳಲ್ಲಿ ಪಿಎಫ್ಐ ವಿಧ್ವಂಸಕ ಕೃತ್ಯಗಳನ್ನು ನಡೆಸುತ್ತಿದ್ದಿದ್ದು ಬಯಲಾಗಿದೆ, ಕಾಂಗ್ರೆಸ್ ಸೇರಿದಂತೆ ಎಲ್ಲ ವಿರೋಧ ಪಕ್ಷಗಳು ಪಿಎಫ್ಐ ಸಂಘಟನೆಯನ್ನು ನಿಷೇಧಿಸಬೇಕೆಂದು ಒತ್ತಾಯಿಸುತ್ತಿದ್ದವು ಎಂದು ಬೊಮ್ಮಾಯಿ ಹೇಳಿದರು.
ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯ (PFI) ಸಂಘಟನೆಯನ್ನು ಯಾವಾಗ ಬ್ಯಾನ್ ಮಾಡಲಾಗುತ್ತದೆ ಎಂದು ನಾಡಿನ ನಾಗರಿಕರು ಪದೇಪದೆ ಕೇಳುತ್ತಿದ್ದ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಹೇಳಿದರು. ಬುಧವಾರ ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತಾಡಿದ ಮುಖ್ಯಮಂತ್ರಿಗಳು, ದೇಶದ ನಾನಾ ಭಾಗಗಳಲ್ಲಿ ಪಿಎಫ್ಐ ವಿಧ್ವಂಸಕ ಕೃತ್ಯಗಳನ್ನು ನಡೆಸುತ್ತಿದ್ದಿದ್ದು ಬಯಲಾಗಿದೆ, ಕಾಂಗ್ರೆಸ್ ಸೇರಿದಂತೆ ಎಲ್ಲ ವಿರೋಧ ಪಕ್ಷಗಳು ಪಿಎಫ್ಐ ಸಂಘಟನೆಯನ್ನು ನಿಷೇಧಿಸಬೇಕೆಂದು ಒತ್ತಾಯಿಸುತ್ತಿದ್ದವು, ಹಾಗಾಗಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಮತ್ತು ಗೃಹ ಸಚಿವ ಅಮಿತ್ ಶಾ (Amit Shah) ಪಿಎಫ್ಐ ಮತ್ತು ಅದರ 8 ಅಂಗಸಂಸ್ಥೆಗಳನ್ನು ಬ್ಯಾನ್ ಮಾಡಿದ್ದಾರೆ ಅಂತ ಹೇಳಿದರು.
Published on: Sep 28, 2022 12:06 PM
Latest Videos