ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್ಗೆ ನೈಟ್ ರೈಡರ್ಸ್
Gulf Giants vs Abu Dhabi Knight Riders: ಈ ಹಂತದಲ್ಲಿ 51 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ 83 ರನ್ ಬಾರಿಸಿದ್ದ ಮೈಕೆಲ್ ಪೆಪ್ಪರ್ ಔಟಾದರು. ಇದಾಗ್ಯೂ ಮತ್ತೊಂದೆಡೆ ಉತ್ತಮ ಬ್ಯಾಟಿಂಗ್ ಮುಂದುವರೆಸಿದ ಸಾಲ್ಟ್ 56 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 2 ಫೋರ್ಗಳೊಂದಿಗೆ ಅಜೇಯ 72 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಅಬುಧಾಬಿ ನೈಟ್ ರೈಡರ್ಸ್ ತಂಡವು 20 ಓವರ್ಗಳಲ್ಲಿ 179 ರನ್ ಕಲೆಹಾಕಿತು.
ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಇಂಟರ್ನ್ಯಾಷನಲ್ ಲೀಗ್ ಟಿ20 ಟೂರ್ನಿಯ 30ನೇ ಪಂದ್ಯದಲ್ಲಿ ಅಬುಧಾಬಿ ನೈಟ್ ರೈಡರ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಜಯದೊಂದಿಗೆ ಅಬುಧಾಬಿ ಪಡೆ ಪ್ಲೇಆಫ್ಗೆ ಅರ್ಹತೆ ಪಡೆದುಕೊಂಡಿದೆ. ಈ ಮ್ಯಾಚ್ನಲ್ಲಿ ಟಾಸ್ ಗೆದ್ದ ಗಲ್ಫ್ ಜೈಂಟ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು.
ಅದರಂತೆ ಮೊದಲು ಬ್ಯಾಟ್ ಮಾಡಿದ ಅಬುಧಾಬಿ ನೈಟ್ ರೈಡರ್ಸ್ ತಂಡಕ್ಕೆ ಫಿಲ್ ಸಾಲ್ಟ್ ಹಾಗೂ ಮೈಕೆಲ್ ಪೆಪ್ಪರ್ ಭರ್ಜರಿ ಆರಂಭ ಒದಗಿಸಿದ್ದರು. ಮೊದಲ ಓವರ್ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಈ ಜೋಡಿಯು ಮೊದಲ ವಿಕೆಟ್ಗೆ 131 ರನ್ಗಳ ಜೊತೆಯಾಟವಾಡಿದರು.
ಈ ಹಂತದಲ್ಲಿ 51 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ 83 ರನ್ ಬಾರಿಸಿದ್ದ ಮೈಕೆಲ್ ಪೆಪ್ಪರ್ ಔಟಾದರು. ಇದಾಗ್ಯೂ ಮತ್ತೊಂದೆಡೆ ಉತ್ತಮ ಬ್ಯಾಟಿಂಗ್ ಮುಂದುವರೆಸಿದ ಸಾಲ್ಟ್ 56 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 2 ಫೋರ್ಗಳೊಂದಿಗೆ ಅಜೇಯ 72 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಅಬುಧಾಬಿ ನೈಟ್ ರೈಡರ್ಸ್ ತಂಡವು 20 ಓವರ್ಗಳಲ್ಲಿ 179 ರನ್ ಕಲೆಹಾಕಿತು.
180 ರನ್ಗಳ ಗುರಿ ಬೆನ್ನತ್ತಿದ ಗಲ್ಫ್ ಜೈಂಟ್ಸ್ ತಂಡವು 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 147 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಅಬುಧಾಬಿ ನೈಟ್ ರೈಡರ್ಸ್ ತಂಡವು 32 ರನ್ಗಳ ಜಯ ಸಾಧಿಸಿ ಪ್ಲೇಆಫ್ಗೆ ಅರ್ಹತೆ ಗಿಟ್ಟಿಸಿಕೊಂಡಿದೆ.

