ಭರ್ಜರಿ ಹಾಫ್ ಸೆಂಚುರಿ: ಶತಕದಂಚಿನಲ್ಲಿ ಎಡವಿದ ಫಿಲ್ ಸಾಲ್ಟ್
New Zealand vs England, 2nd T20I: ನ್ಯೂಝಿಲೆಂಡ್ ಹಾಗೂ ಇಂಗ್ಲೆಂಡ್ ನಡುವಣ ಮೊದಲ ಟಿ20 ಪಂದ್ಯವು ಮಳೆಯಿಂದಾಗಿ ರದ್ದಾಗಿತ್ತು. ಇದೀಗ ದ್ವಿತೀಯ ಪಂದ್ಯದಲ್ಲಿ ಇಂಗ್ಲೆಂಡ್ ಪರ ಫಿಲ್ ಸಾಲ್ಟ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಭರ್ಜರಿ ಬ್ಯಾಟಿಂಗ್ನೊಂದಿಗೆ ಇಂಗ್ಲೆಂಡ್ ನ್ಯೂಝಿಲೆಂಡ್ಗೆ ಕಠಿಣ ಗುರಿ ನೀಡಿದೆ.
ನ್ಯೂಝಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಆರಂಭಿಕ ದಾಂಡಿಗ ಫಿಲ್ ಸಾಲ್ಟ್ ಸ್ಫೋಟಕ ಅರ್ಧಶತಕ ಬಾರಿಸಿದ್ದಾರೆ. ಕ್ರೈಸ್ಟ್ ಚರ್ಚ್ನ ಹ್ಯಾಗ್ಲಿ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್ ಆಯ್ದುಕೊಂಡಿದ್ದರು.
ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ನಿರೀಕ್ಷಿತ ಆರಂಭ ಪಡೆಯಲು ಸಾಧ್ಯವಾಗಿರಲಿಲ್ಲ. ಆರಂಭಿಕನಾಗಿ ಕಣಕ್ಕಿಳಿದ ಜೋಸ್ ಬಟ್ಲರ್ ಕೇವಲ 4 ರನ್ಗಳಿಸಿ ಔಟಾಗಿದ್ದರು. ಇದಾಗ್ಯೂ ಮತ್ತೋರ್ವ ಆರಂಭಿಕ ದಾಂಡಿಗ ಫಿಲ್ ಸಾಲ್ಟ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.
ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ಗೆ ಒತ್ತು ನೀಡಿದ್ದ ಫಿಲ್ ಸಾಲ್ಟ್ ಆ ಬಳಿಕ ಹೊಡಿಬಡಿ ಆಟಕ್ಕೆ ಮರಳಿದರು. ಪರಿಣಾಮ ಸಾಲ್ಟ್ ಬ್ಯಾಟ್ನಿಂದ ಕೇವಲ 33 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಅರ್ಧಶತಕದ ಬಳಿಕ ಕೂಡ ಫಿಲ್ ಸಾಲ್ಟ್ ಅಬ್ಬರನ್ನು ತಡೆಯಲು ನ್ಯೂಝಿಲೆಂಡ್ ಬೌಲರ್ಗಳಿಗೆ ಸಾಧ್ಯವಾಗಲಿಲ್ಲ.
ಪರಿಣಾಮ ಇಂಗ್ಲೆಂಡ್ ತಂಡವು ಮೊದಲ 10 ಓವರ್ಗಳಲ್ಲಿ 110 ರನ್ ಕಲೆಹಾಕಿತು. ಅಲ್ಲದೆ 56 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 11 ಫೋರ್ಗಳೊಂದಿಗೆ 85 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಫಿಲ್ ಸಾಲ್ಟ್ (85) ಹಾಗೂ ಹ್ಯಾರಿ ಬ್ರೂಕ್ (78) ಅವರ ಸಿಡಿಲಬ್ಬರದ ಅರ್ಧಶತಕಗಳ ನೆರವಿನೊಂದಿಗೆ ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 236 ರನ್ ಕಲೆಹಾಕಿದೆ.
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

