ಕಲ್ಯಾಣ ಮಂಟಪದಲ್ಲೇ ಹೃದಯಾಘಾತದಿಂದ ಕುಸಿದುಬಿದ್ದು ಫೋಟೊಗ್ರಾಫರ್ ಸಾವು!

Edited By:

Updated on: Feb 25, 2026 | 9:11 AM

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ಕಲ್ಯಾಣ ಮಂಟಪದಲ್ಲಿ ಮದುವೆ ಆರತಕ್ಷತೆಯ ಫೋಟೋ ತೆಗೆಯುತ್ತಿದ್ದಾಗಲೇ ಬೊಮ್ಮನಹಳ್ಳಿ ಗ್ರಾಮದ ಯುವ ಫೋಟೋಗ್ರಾಫರ್ ಮೂರ್ತಿ ಅವರಿಗೆ ಹೃದಯಾಘಾತ ಸಂಭವಿಸಿದೆ. ಸ್ಥಳದಲ್ಲೇ ಕುಸಿದು ಬಿದ್ದ ಅವರು ಕೊನೆಯುಸಿರೆಳೆದಿದ್ದಾರೆ. ಕರ್ನಾಟಕದಲ್ಲಿ ಇತ್ತೀಚಿಗೆ ಇಂತಹ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ.

ಚಾಮರಾಜನಗರ, ಫೆಬ್ರವರಿ 25: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದ ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ದುರಂತ ಸಂಭವಿಸಿದೆ. ಆರತಕ್ಷತೆ ಫೋಟೋಗಳನ್ನು ತೆಗೆಯುತ್ತಿದ್ದ ಯುವ ಫೋಟೋಗ್ರಾಫರ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೊಮ್ಮನಹಳ್ಳಿ ಗ್ರಾಮದ ಮೂರ್ತಿ ಮೃತ ದುರ್ದೈವಿ. ಮದುವೆ ಮಂಟಪದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾಗ ಮೂರ್ತಿ ಕುಸಿದು ಬಿದ್ದಿದ್ದು, ಕೊನೆಯುಸಿರೆಳೆದಿದ್ದಾರೆ. ಇತ್ತೀಚಿನ ದಿನಗಳಲ್ಲಿ ಇಂತಹ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಗುಂಡ್ಲುಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಫೋಟೋಗ್ರಾಫರ್ ಸಾವಿನಿಂದ ಮದುವೆ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More