ಬಿಜೆಪಿ ಮಾಜಿ ಸಿಎಂ ಒಬ್ಬರ ಅಶ್ಲೀಲ ವಿಡಿಯೋ ಬಿಡುಗಡೆ ಆಗಲಿದೆ: ಮಾಜಿ ಶಾಸಕ ಆನಂದ‌ ನ್ಯಾಮಗೌಡ

Edited By:

Updated on: Aug 24, 2024 | 6:01 PM

ಬಿಜೆಪಿಯ ಮಾಜಿ ಮುಖ್ಯಮಂತ್ರಿಯೊಬ್ಬರ ಬಗ್ಗೆ ಕಾಂಗ್ರೆಸ್ ಮಾಜಿ ಶಾಸಕ ಆನಂದ‌ ನ್ಯಾಮಗೌಡ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಬಿಜೆಪಿಯ ಮಾಜಿ ಸಿಎಂ ಒಬ್ಬರ ಅಶ್ಲೀಲ ವಿಡಿಯೋ ಸಿಡಿ ಶೀಘ್ರ ಬಿಡುಗಡೆಯಾಗಲಿದೆ ಎಂದು ಅವರು ಹೇಳಿದ್ದು, ಸದ್ಯ ಅವರ ಹೇಳಿಕೆಯ ವಿಡಿಯೋ ವೈರಲ್ ಆಗುತ್ತಿದೆ. ವಿಡಿಯೋ ಇಲ್ಲಿದೆ.

ಬಾಗಲಕೋಟೆ, ಆಗಸ್ಟ್​ 24: ಬಿಜೆಪಿಯ ಮಾಜಿ ಮುಖ್ಯಮಂತ್ರಿಯೊಬ್ಬರ ಅಶ್ಲೀಲ ವಿಡಿಯೋ ಇರುವ ಸಿಡಿ ಬಿಡುಗಡೆಯಾಗಲಿದೆ ಎಂದು ಮಾಜಿ ಶಾಸಕ ಆನಂದ‌ ನ್ಯಾಮಗೌಡ ಹೇಳಿದ್ದಾರೆ. ಬಾಗಲಕೋಟೆಯ ಜಮಖಂಡಿ ‌ನಗರದಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಶನಿವಾರ ಮಾತನಾಡಿದ ಅವರು, ಇವತ್ತೊಂದು ಹೊಸ ಸುದ್ದಿ ಬಂದಿದೆ. ನೀವು ಕೇಳಿದ್ದೀರೋ ಇಲ್ಲವೋ ಗೊತ್ತಿಲ್ಲ. ಇವತ್ತೇ ಆ ಸುದ್ದಿ ಕೇಳಿದ್ದೇನೆ. ಅದೇನಪ್ಪಾ ಅಂದರೆ, ರಾಜ್ಯದ ಮಾಜಿ ಮುಖ್ಯಮಂತ್ರಿ ಅವರ ಒಂದು ಅಶ್ಲೀಲ‌ ಸಿಡಿ ಹೊರಗೆ ಬರೋದಿದೆ ಎಂದರು.

ಆ ಅಶ್ಲೀಲ‌ ಸಿಡಿ ಭಾರತೀಯ ಜನತಾ ಪಾರ್ಟಿಯವನದ್ದೇ. ಬಿಜೆಪಿ ಮಾಜಿ ‌ಮುಖ್ಯಮಂತ್ರಿಯ ಅಶ್ಲೀಲ ಸಿಡಿ ಶೀಘ್ರದಲ್ಲಿ ಬಿಡುಗಡೆಯಾಗಲಿದೆ ಎಂದು ನ್ಯಾಮಗೌಡ ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಹೈಕಮಾಂಡ್ ಜತೆ ಏನೇನು ಚರ್ಚೆ ನಡೆಯಿತು? ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಹೇಳಿದ್ದಿಷ್ಟು

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​​ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ, ಪ್ರತಿಭಟನಾ ಭಾಷಣದಲ್ಲಿ ನ್ಯಾಮಗೌಡ ಸಿಡಿ ಕುರಿತು ಹೇಳಿಕೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ