AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್ ಭವನದಲ್ಲಿ ಮಹನೀಯರ ಫೋಟೋ ಜತೆ ಟಿಪ್ಪು ಫೋಟೋ ಇಡಬೇಕು: ವಾಟಾಳ್ ನಾಗರಾಜ್

ಸಂಸತ್ ಭವನದಲ್ಲಿ ಮಹನೀಯರ ಫೋಟೋ ಜತೆ ಟಿಪ್ಪು ಫೋಟೋ ಇಡಬೇಕು: ವಾಟಾಳ್ ನಾಗರಾಜ್

ನವೀನ್ ಕುಮಾರ್ ಟಿ.
| Edited By: |

Updated on: Nov 10, 2026 | 10:16 PM

Share

ಮುಖ್ಯಾಂಶಗಳು

  • ಇಂದು ಟಿಪ್ಪು ಸುಲ್ತಾನ್ ಜನ್ಮದಿನಾಚರಣೆ
  • ಟಿಪ್ಪು ಜನ್ಮಸ್ಥಳ ದೇವನಹಳ್ಳಿ ಪಟ್ಟಣಕ್ಕೆ ವಾಟಾಳ್ ನಾಗರಾಜ್ ಭೇಟಿ
  • ಸರ್ಕಾರಗಳಿಗೆ ಟಿಪ್ಪು ಸ್ಮಾರಕ ಬಗ್ಗೆ ಗಮನವಿಲ್ಲ ಎಂದ ವಾಟಾಳ್

ವಾಟಾಳ್ ನಾಗರಾಜ್ ಅವರು ಟಿಪ್ಪು ಸುಲ್ತಾನ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸಂಸತ್ ಭವನದಲ್ಲಿ ಟಿಪ್ಪು ಅವರ ಚಿತ್ರಪಟವನ್ನು ಇಡಬೇಕೆಂದು ಒತ್ತಾಯಿಸಿದ್ದಾರೆ. ಯಾವುದೇ ಭೇದಭಾವವಿಲ್ಲದೆ ಈ ಮಹಾನ್ ಹೋರಾಟಗಾರನಿಗೆ ಗೌರವ ಸಲ್ಲಿಸಬೇಕು ಎಂದರು. ತನ್ನ ಮಕ್ಕಳನ್ನು ದೇಶಕ್ಕಾಗಿ ಒತ್ತೆಯಿಟ್ಟ ಟಿಪ್ಪು ಅವರ ಆದರ್ಶ ಮತ್ತು ಪ್ರಾಮಾಣಿಕತೆಯನ್ನು ಶ್ಲಾಘಿಸಿದರು. ದೇವನಹಳ್ಳಿಯಲ್ಲಿ ಸ್ಮಾರಕ ನಿರ್ಮಿಸಲು ಡಿ.ಕೆ. ಶಿವಕುಮಾರ್ ಸರ್ಕಾರಕ್ಕೆ ಮನವಿ ಮಾಡಿದರು.

ದೇವನಹಳ್ಳಿ, ನವೆಂಬರ್​​ 10: ಇಂದು ಟಿಪ್ಪು ಸುಲ್ತಾನ್ ಜನ್ಮದಿನಾಚರಣೆ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿರುವ ಟಿಪ್ಪು ಪುತ್ಥಳಿಗೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು, ‘ಟಿಪ್ಪು ಸುಲ್ತಾನ್ ಈ ದೇಶದ ಮಹಾನ್ ಹೋರಾಟಗಾರ. ದೇಶದಲ್ಲಿ ಆಂಗ್ಲರ ವಿರುದ್ಧ ಹೋರಾಟ ಮಾಡಿದವರು ಟಿಪ್ಪು ಸುಲ್ತಾನ್. ಸರ್ಕಾರಗಳಿಗೆ ಟಿಪ್ಪು ಸ್ಮಾರಕ ಬಗ್ಗೆ ಗಮನವಿಲ್ಲ. ರಾಷ್ಟ್ರೀಯ ಹೆದ್ದಾರಿಗೆ ಅವರ ಹೆಸರಿಡಬೇಕು. ಸಂಸತ್ ಭವನದಲ್ಲಿ ಮಹನೀಯರ ಫೋಟೋ ಜತೆ ಟಿಪ್ಪು ಫೋಟೋ ಇಡಬೇಕು. ಡಿಕೆ ಶಿವಕುಮಾರ್ ಸರ್ಕಾರಕ್ಕೆ ನಾನು ಒತ್ತಾಯ ಮಾಡುತ್ತೇನೆ’ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ನವೀನ್ ಕುಮಾರ್ ಟಿ.
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More