ಸಂಸತ್ ಭವನದಲ್ಲಿ ಮಹನೀಯರ ಫೋಟೋ ಜತೆ ಟಿಪ್ಪು ಫೋಟೋ ಇಡಬೇಕು: ವಾಟಾಳ್ ನಾಗರಾಜ್
ಮುಖ್ಯಾಂಶಗಳು
- ಇಂದು ಟಿಪ್ಪು ಸುಲ್ತಾನ್ ಜನ್ಮದಿನಾಚರಣೆ
- ಟಿಪ್ಪು ಜನ್ಮಸ್ಥಳ ದೇವನಹಳ್ಳಿ ಪಟ್ಟಣಕ್ಕೆ ವಾಟಾಳ್ ನಾಗರಾಜ್ ಭೇಟಿ
- ಸರ್ಕಾರಗಳಿಗೆ ಟಿಪ್ಪು ಸ್ಮಾರಕ ಬಗ್ಗೆ ಗಮನವಿಲ್ಲ ಎಂದ ವಾಟಾಳ್
ವಾಟಾಳ್ ನಾಗರಾಜ್ ಅವರು ಟಿಪ್ಪು ಸುಲ್ತಾನ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸಂಸತ್ ಭವನದಲ್ಲಿ ಟಿಪ್ಪು ಅವರ ಚಿತ್ರಪಟವನ್ನು ಇಡಬೇಕೆಂದು ಒತ್ತಾಯಿಸಿದ್ದಾರೆ. ಯಾವುದೇ ಭೇದಭಾವವಿಲ್ಲದೆ ಈ ಮಹಾನ್ ಹೋರಾಟಗಾರನಿಗೆ ಗೌರವ ಸಲ್ಲಿಸಬೇಕು ಎಂದರು. ತನ್ನ ಮಕ್ಕಳನ್ನು ದೇಶಕ್ಕಾಗಿ ಒತ್ತೆಯಿಟ್ಟ ಟಿಪ್ಪು ಅವರ ಆದರ್ಶ ಮತ್ತು ಪ್ರಾಮಾಣಿಕತೆಯನ್ನು ಶ್ಲಾಘಿಸಿದರು. ದೇವನಹಳ್ಳಿಯಲ್ಲಿ ಸ್ಮಾರಕ ನಿರ್ಮಿಸಲು ಡಿ.ಕೆ. ಶಿವಕುಮಾರ್ ಸರ್ಕಾರಕ್ಕೆ ಮನವಿ ಮಾಡಿದರು.
ದೇವನಹಳ್ಳಿ, ನವೆಂಬರ್ 10: ಇಂದು ಟಿಪ್ಪು ಸುಲ್ತಾನ್ ಜನ್ಮದಿನಾಚರಣೆ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿರುವ ಟಿಪ್ಪು ಪುತ್ಥಳಿಗೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು, ‘ಟಿಪ್ಪು ಸುಲ್ತಾನ್ ಈ ದೇಶದ ಮಹಾನ್ ಹೋರಾಟಗಾರ. ದೇಶದಲ್ಲಿ ಆಂಗ್ಲರ ವಿರುದ್ಧ ಹೋರಾಟ ಮಾಡಿದವರು ಟಿಪ್ಪು ಸುಲ್ತಾನ್. ಸರ್ಕಾರಗಳಿಗೆ ಟಿಪ್ಪು ಸ್ಮಾರಕ ಬಗ್ಗೆ ಗಮನವಿಲ್ಲ. ರಾಷ್ಟ್ರೀಯ ಹೆದ್ದಾರಿಗೆ ಅವರ ಹೆಸರಿಡಬೇಕು. ಸಂಸತ್ ಭವನದಲ್ಲಿ ಮಹನೀಯರ ಫೋಟೋ ಜತೆ ಟಿಪ್ಪು ಫೋಟೋ ಇಡಬೇಕು. ಡಿಕೆ ಶಿವಕುಮಾರ್ ಸರ್ಕಾರಕ್ಕೆ ನಾನು ಒತ್ತಾಯ ಮಾಡುತ್ತೇನೆ’ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
