ಬೆಂಗಳೂರು ಬ್ಯಾಡರಹಳ್ಳಿಯ ಪ್ಲಾಸ್ಟಿಕ್ ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ, ಪ್ರಾಣಹಾನಿಯಿಲ್ಲ

ಅರುಣ್​ ಕುಮಾರ್​ ಬೆಳ್ಳಿ

Updated on: Feb 13, 2025 | 6:15 PM

ಸಾಮಾನ್ಯವಾಗಿ ಇಂಥ ಸಂದರ್ಭಗಳಲ್ಲಿ ಮಾಧ್ಯಮದವರಿಗೆ ಸ್ಥಳೀಯರಿಂದ ಮತ್ತು ಪ್ರತ್ಯಕ್ಷದರ್ಶಿಗಳಿಂದ ಮಾಹಿತಿ ಲಭ್ಯವಾಗುತ್ತದೆ. ಇಲ್ಲಿ ನಮ್ಮ ವರದಿಗಾರ ಮೂವರೊಂದಿಗೆ ಮಾತಾಡಿದ್ದಾರೆ, ಅದರೆ ಯಾರಿಂದಲೂ ನಿಖರವಾದ ಮಾಹಿತಿ ಸಿಕ್ಕಿಲ್ಲ. ಒಬ್ಬ ವ್ಯಕ್ತಿ ಗುಟ್ಕಾ ತಿನ್ನುತ್ತಾ ಮಾತಾಡಿದರೆ ಇನ್ನೊಬ್ಬರಿಗೆ ಕನ್ನಡ ಸರಿಯಾಗಿ ಮಾತಾಡಲು ಬರಲ್ಲ. ಸರಿಯಾಗಿ ಮಾತಾಡಿದ ಮೊದಲ ವ್ಯಕ್ತಿ ಅರ್ಧಂಬರ್ಧ ಮಾಹಿತಿ ನೀಡುತ್ತಾರೆ.

ಬೆಂಗಳೂರು: ಬೇಸಿಗೆ ಶುರುವಾಗುತ್ತಿದ್ದಂತೆ ಬೆಂಗಳೂರಲ್ಲಿ ಅಗ್ನಿ ಅವಘಡಗಳ ಪ್ರವರ ಶುರುವಾಗಿದೆ. ನಗರದ ಬ್ಯಾಡರಹಳ್ಳಿಯಲ್ಲಿರುವ ಪ್ಲಾಸ್ಟಿಕ್ ತಯಾರಿಕಾ ಘಟಕದಲ್ಲಿ ಬೆಂಕಿ ಹೊತ್ತಿಕೊಂಡು ಅದರ ಜ್ವಾಲೆಗಳು ಪಕ್ಕದ ಕಟ್ಟಡಗಳಿಗೂ ಪಸರಿಸಿವೆ. ಕೆಲಸಗಾರರು ಮಧ್ಯಾಹ್ನದ ಊಟಕ್ಕೆ ಅಂತ ಹೋದಾಗ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳುತ್ತಾರೆ. ಅದೃಷ್ಟ ವಶಾತ್ ಪ್ರಾಣಾಪಾಯವೇನೂ ಸಂಭವಿಸಿಲ್ಲ ಆದರೆ ಕಾರ್ಖಾನೆ ಮಾತ್ರ ಸಂಪೂರ್ಣವಾಗಿ ಸುಟ್ಟು ಹೋಗಿದೆ. ಅಗ್ನಿಶಾಮಕ ದಳದ ಸಿಬ್ಬಂಡಿ ಬೆಂಕಿಯನ್ನು ಅರಿಸುವ ಪ್ರಯತ್ನದಲ್ಲಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ಧಗಧಗನೆ ಹೊತ್ತಿ ಉರಿದ ಒಕಿನೊವಾ ಶೋರೂಮ್​

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.