ನನ್ನ ನಾಲ್ಕು ಹೆಣ್ಣುಮಕ್ಕಳನ್ನು ನೋಡಿಕೊಳ್ಳಿ, ಬಿಎಲ್​ಒ ಸಾಯುವ ಮುನ್ನ ಮಾಡಿರುವ ವಿಡಿಯೋ ವೈರಲ್

Updated on: Dec 01, 2025 | 2:03 PM

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಗಾಗಿ ನೇಮಕಗೊಂಡಿದ್ದ ಬ್ಲಾಕ್ ಅಭಿವೃದ್ಧಿ ಅಧಿಕಾರಿ (ಬಿಎಲ್‌ಒ) ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಸಾಯುವ ಮುನ್ನ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶದ ಮೊರಾದಾಬಾದ್‌ನ ಭೋಜ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೊರಾದಾಬಾದ್, ಡಿಸೆಂಬರ್ 01: ಮತದಾರರ ಪಟ್ಟಿ ಪರಿಷ್ಕರಣೆ(SIR) ಪ್ರಕ್ರಿಯೆಗಾಗಿ ನೇಮಕಗೊಂಡಿದ್ದ ಬಿಎಲ್‌ಒ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಸಾಯುವ ಮುನ್ನ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶದ ಮೊರಾದಾಬಾದ್‌ನ ಭೋಜ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಹೇರಿ ಬ್ರಾಹ್ಮಣನ್ ಗ್ರಾಮದ ನಿವಾಸಿ ಸರ್ವೇಶ್ ಸಿಂಗ್ ಶನಿವಾರ ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಸಾಯುವ ಮೊದಲು ಎರಡು ಪುಟಗಳ ಆತ್ಮಹತ್ಯೆ ಪತ್ರ ಬರೆದಿದ್ದಾರೆ. ಅವರ ಸಾವಿನ ನಂತರ ಅವರ ಪತ್ನಿಯ ಹೇಳಿಕೆಯನ್ನು ಸಹ ಬಿಡುಗಡೆ ಮಾಡಲಾಗಿದೆ. ಕೆಲಸದ ಒತ್ತಡದಿಂದಾಗಿ ತಮ್ಮ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಈಗ, ಸರ್ವೇಶ್ ಸಿಂಗ್ ಅವರ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಸರ್ವೇಶ್ ಸಿಂಗ್ ಸಹಾಯಕ ಶಿಕ್ಷಕರಾಗಿದ್ದರು. ಅವರನ್ನು ವಿಶೇಷ ಮತದಾರರ ಪರಿಷ್ಕರಣೆ ( SIR) ಗೆ ಬಿಎಲ್​ಒ ಆಗಿ ನೇಮಿಸಾಗಿತ್ತು . ಕೆಲಸದ ಒತ್ತಡ ಮತ್ತು ಗುರಿಗಳನ್ನು ತಲುಪಲು ಸಾಧ್ಯವಾಗದ ಕಾರಣ ಅವರು ಈ ತಪ್ಪು ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ.
ಸರ್ವೇಶ್ ಸಿಂಗ್ ಅವರ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಇದು ಅವರ ಆತ್ಮಹತ್ಯೆಗೆ ಸ್ವಲ್ಪ ಮೊದಲು ಮಾಡಿರುವ ವಿಡಿೋ ಎಂದು ಹೇಳಲಾಗುತ್ತಿದೆ. ವೀಡಿಯೊದಲ್ಲಿ, ಸರ್ವೇಶ್ ಸಿಂಗ್ ತಮ್ಮ ಕುಟುಂಬಕ್ಕೆ ಕ್ಷಮೆಯಾಚಿಸುತ್ತಿರುವುದು ಕಂಡುಬರುತ್ತದೆ. ವೀಡಿಯೊದಲ್ಲಿ, ಸರ್ವೇಶ್ ಸಿಂಗ್ ತೀವ್ರವಾಗಿ ಅಳುತ್ತಾ ತನ್ನ ನಾಲ್ಕು ಚಿಕ್ಕ ಹೆಣ್ಣುಮಕ್ಕಳನ್ನು ನೋಡಿಕೊಳ್ಳುವಂತೆ ಕೇಳುತ್ತಿರುವುದನ್ನು ಕಾಣಬಹುದು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Published on: Dec 01, 2025 01:58 PM