AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಂ ಆವಾಸ್ ಯೋಜನೆಯಿಂದ ಬದಲಾದ ಬದುಕು: ಮಧುರೈನ ಮಹಿಳೆ ಬರೆದ ಪತ್ರ ಹಂಚಿಕೊಂಡ ಪ್ರಧಾನಿ ಮೋದಿ

ಪಿಎಂ ಆವಾಸ್ ಯೋಜನೆಯಿಂದ ಬದಲಾದ ಬದುಕು: ಮಧುರೈನ ಮಹಿಳೆ ಬರೆದ ಪತ್ರ ಹಂಚಿಕೊಂಡ ಪ್ರಧಾನಿ ಮೋದಿ

ಗಂಗಾಧರ​ ಬ. ಸಾಬೋಜಿ
|

Updated on:Apr 13, 2023 | 8:25 PM

Share

ಆವಾಸ್ ಯೋಜನೆ ಅಡಿಯಲ್ಲಿ ಮನೆ ದೊರೆತ ಹಿನ್ನೆಲೆ ತಮಿಳುನಾಡಿನ ಮಧುರೈ ನಿವಾಸಿ ಎನ್​. ಸುಬ್ಬುಲಕ್ಷ್ಮಿ ಎಂಬವರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುವ ಮೂಲಕ ಶ್ಲಾಘಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಜನರ ಕಲ್ಯಾಣಕ್ಕೆ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲೂ ಹಲವು ಯೋಜನೆಗಳ ಫಲಾನುಭವಿಗಳು ತಮಗೆ ಹೇಗೆ ಪ್ರಯೋಜನವಾಯಿತು ಎನ್ನುವುದನ್ನು ಸಾಮಾಜಿಕ ತಾಣಗಳ ಮೂಲಕ ವಿವರಿಸುತ್ತಾರೆ. ಅದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸ್ವತಃ ಪರಾಮರ್ಶಿಸಿ, ಸಂದರ್ಭಾನುಸಾರ ಪ್ರಸ್ತಾಪಿಸುತ್ತಾರೆ. ಅದರಂತೆ ಈ ಬಾರಿ ತಮಿಳುನಾಡಿನ ಮಧುರೈ ನಿವಾಸಿ ಎನ್​. ಸುಬ್ಬುಲಕ್ಷ್ಮಿ ಎಂಬವರು ತಮಗೆ ಪ್ರಧಾನಿ ಆವಾಸ್ ಯೋಜನೆ (Awas Yojana) ಮೂಲಕ ಮನೆ ದೊರೆತಿರುವುದಕ್ಕೆ ಸಂತಸ ವ್ಯಕ್ತಪಡಿಸಿ, ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ಪತ್ರ ಮತ್ತು ಮಹಿಳೆಯ ಫೋಟೊವನ್ನು ಪ್ರಧಾನಿ ಮೋದಿ ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Apr 13, 2023 08:25 PM
Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More