AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಂ ಕಿಸಾನ್ ಸಮ್ಮಾನ್ ನಿಧಿ ಫಲಾನುಭವಿಗಳೇ ಗಮನಿಸಿ: ಇ-ಕೆವೈಸಿಗೆ ಸೆ. 30 ಡೆಡ್​​ಲೈನ್​​

ಪಿಎಂ ಕಿಸಾನ್ ಸಮ್ಮಾನ್ ನಿಧಿ ಫಲಾನುಭವಿಗಳೇ ಗಮನಿಸಿ: ಇ-ಕೆವೈಸಿಗೆ ಸೆ. 30 ಡೆಡ್​​ಲೈನ್​​

ಹರೀಶ್ ಜಿ.ಆರ್​.
| Edited By: |

Updated on: Sep 16, 2026 | 4:00 PM

Share

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿಗಳು ಸೆಪ್ಟೆಂಬರ್ 30ರೊಳಗೆ ಇ-ಕೆವೈಸಿ ಪೂರ್ಣಗೊಳಿಸುವುದು ಕಡ್ಡಾಯವಾಗಿದೆ. ಇಲ್ಲವಾದಲ್ಲಿ ಮುಂದಿನ 2,000 ಕಂತು ಸಿಗುವುದಿಲ್ಲ. ರಾಜ್ಯದಲ್ಲಿ ಸುಮಾರು 47 ಲಕ್ಷ ರೈತರು ಇ-ಕೆವೈಸಿ ಮಾಡಿಸುವುದು ಬಾಕಿಯಿದೆ. ಅಕ್ರಮಗಳನ್ನು ತಡೆಯಲು ಫೇಸ್ ಅಥೆಂಟಿಕೇಷನ್ ಅಥವಾ ಬಯೋಮೆಟ್ರಿಕ್ ಮೂಲಕ ಇ-ಕೆವೈಸಿ ಮಾಡಿಸಬಹುದಾಗಿದೆ.

ಬೆಂಗಳೂರು, ಸೆಪ್ಟೆಂಬರ್​​ 16: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿಗಳಿಗೆ ಪ್ರಮುಖ ಸೂಚನೆ ನೀಡಲಾಗಿದೆ. ಯೋಜನೆಯ ಮುಂದಿನ ಕಂತಿನ ಹಣ ಪಡೆಯಲು ಸೆಪ್ಟೆಂಬರ್ 30, 2023ರೊಳಗೆ ಇ-ಕೆವೈಸಿ (e-KYC) ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪೂರ್ಣಗೊಳಿಸಬೇಕು ಎಂದು ಕೇಂದ್ರ ಕೃಷಿ ಸಚಿವಾಲಯ ಮತ್ತು ರಾಜ್ಯ ಕೃಷಿ ಇಲಾಖೆ ತಿಳಿಸಿದೆ. ನಿಗದಿತ ಗಡುವಿನೊಳಗೆ ಇ-ಕೆವೈಸಿ ಮಾಡಿಸದಿದ್ದರೆ, ಫಲಾನುಭವಿಗಳಿಗೆ ಬರಬೇಕಾದ ಮುಂದಿನ 2,000 ಕಂತಿನ ಹಣ ಸ್ಥಗಿತಗೊಳ್ಳಲಿದೆ. ರಾಜ್ಯದಲ್ಲಿ ಪ್ರಸ್ತುತ 47 ಲಕ್ಷಕ್ಕೂ ಹೆಚ್ಚು ರೈತರು ಇನ್ನೂ ಇ-ಕೆವೈಸಿ ಮಾಡಿಸಿಲ್ಲ ಎಂದು ಅಂದಾಜಿಸಲಾಗಿದೆ. ಹಿಂದೆ ಓಟಿಪಿ ಆಧಾರಿತ ಕೆವೈಸಿ ವಿಧಾನದಲ್ಲಿ ಅಕ್ರಮಗಳು ನಡೆಯುತ್ತಿದ್ದವು. ಮರಣ ಹೊಂದಿದ ಅಥವಾ ಜಮೀನು ಮಾರಾಟ ಮಾಡಿದವರ ಖಾತೆಗೂ ಹಣ ಹೋಗುತ್ತಿದ್ದ ನಿದರ್ಶನಗಳಿವೆ. ಇದನ್ನು ತಪ್ಪಿಸಲು, ಈಗ ಫೇಸ್ ಅಥೆಂಟಿಕೇಷನ್ ಅಥವಾ ಬಯೋಮೆಟ್ರಿಕ್ ವಿಧಾನಗಳ ಮೂಲಕ ಇ-ಕೆವೈಸಿ ಮಾಡಿಸಬೇಕಾಗಿದೆ. ರೈತರು ಪಿಎಂ ಕಿಸಾನ್ ಅಪ್ಲಿಕೇಶನ್ ಬಳಸಿ ಫೇಸ್ ಅಥೆಂಟಿಕೇಷನ್ ಮೂಲಕ ಅಥವಾ ಗ್ರಾಮ ಒನ್/ಸಿಇ ಸೆಂಟರ್‌ಗಳಿಗೆ ಭೇಟಿ ನೀಡಿ ಬಯೋಮೆಟ್ರಿಕ್ ಮೂಲಕ ಇ-ಕೆವೈಸಿ ಪೂರ್ಣಗೊಳಿಸಬಹುದಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More