PM Kisan Yojana: ಕೇಂದ್ರ ಸರ್ಕಾರದಿಂದ 14ನೇ ಕಂತಿನ ಹಣ ಬಿಡುಗಡೆಗೆ ಮುನ್ನ ರೈತರು ಮಾಡಬೇಕಾದ ಕೆಲಸಗಳಿವು

PM Kisan Yojana: ಕೇಂದ್ರ ಸರ್ಕಾರದಿಂದ 14ನೇ ಕಂತಿನ ಹಣ ಬಿಡುಗಡೆಗೆ ಮುನ್ನ ರೈತರು ಮಾಡಬೇಕಾದ ಕೆಲಸಗಳಿವು

ಕಿರಣ್​ ಐಜಿ
|

Updated on: Apr 20, 2023 | 4:37 PM

ಕೇಂದ್ರ ಸರ್ಕಾರ ಈವರೆಗೂ 2,000 ರೂಗಳ 13 ಕಂತುಗಳನ್ನು ಬಿಡುಗಡೆ ಮಾಡಿದೆ. ಪ್ರತೀ 4 ತಿಂಗಳಿಗೊಮ್ಮೆ 2,000 ರೂ ಹಣವನ್ನು ಕೇಂದ್ರ ಸರ್ಕಾರ ರೈತರ ಖಾತೆಗಳಿಗೆ ನೇರವಾಗಿ ವರ್ಗಾಯಿಸುತ್ತದೆ. 2019ರಲ್ಲಿ ಆರಂಭವಾದ ಈ ಯೋಜನೆಯಲ್ಲಿ ಈವರೆಗೂ 12 ಕೋಟಿಯಷ್ಟು ರೈತರು ನೊಂದಾವಣಿ ಮಾಡಿಕೊಂಡಿದ್ದಾರೆ.

ರೈತರಲ್ಲಿ ಬಹಳ ಜನಪ್ರಿಯವಾಗಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ಕೇಂದ್ರ ಸರ್ಕಾರ ಈವರೆಗೂ 2,000 ರೂಗಳ 13 ಕಂತುಗಳನ್ನು ಬಿಡುಗಡೆ ಮಾಡಿದೆ. ಪ್ರತೀ 4 ತಿಂಗಳಿಗೊಮ್ಮೆ 2,000 ರೂ ಹಣವನ್ನು ಕೇಂದ್ರ ಸರ್ಕಾರ ರೈತರ ಖಾತೆಗಳಿಗೆ ನೇರವಾಗಿ ವರ್ಗಾಯಿಸುತ್ತದೆ. 2019ರಲ್ಲಿ ಆರಂಭವಾದ ಈ ಯೋಜನೆಯಲ್ಲಿ ಈವರೆಗೂ 12 ಕೋಟಿಯಷ್ಟು ರೈತರು ನೊಂದಾವಣಿ ಮಾಡಿಕೊಂಡಿದ್ದಾರೆ. ಕಳೆದ ಬಾರಿ 8 ಕೋಟಿಗಿಂತಲೂ ಹೆಚ್ಚು ಮಂದಿಗೆ 13ನೇ ಕಂತಿನ ಹಣ ಸಿಕ್ಕಿದೆ. ಇದೀಗ ಈ ಯೋಜನೆಯ 14ನೇ ಕಂತಿನ ಹಣ ಬಿಡುಗಡೆ ಕುರಿತು ಚರ್ಚೆ ನಡೆಯುತ್ತಿದೆ. ಸರಿಯಾದ ದಾಖಲೆ ಅಪ್​ಡೇಟ್ ಮಾಡದಿರುವುದು ಸೇರಿದಂತೆ ಕೆಲವು ಕಾರಣಗಳಿಗೆ ಹಲವು ಮಂದಿಗೆ ಪಿಎಂ ಕಿಸಾನ್ ಯೋಜನೆಯ 13ನೇ ಕಂತಿನ ಹಣ ಬಿಡುಗಡೆ ಆಗದೇ ಇರಬಹುದು. ಈ ಹಿನ್ನೆಲೆಯಲ್ಲಿ ಪ್ರಯೋಜನಕ್ಕೆ ಬರುವ ಕೆಲವೊಂದಿಷ್ಟು ಮಾಹಿತಿ ಇಲ್ಲಿದೆ. ಇವುಗಳನ್ನು ಸರಿಯಾಗಿ ಗಮನಿಸಿದರೆ, ಯೋಜನೆಯ ಸೂಕ್ತ ಪ್ರಯೋಜನ ಪಡೆಯಬಹುದು.