AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ದೆಹಲಿ ಮತ್ತು ಹರಿಯಾಣ ನಡುವೆ ದ್ವೇಷ ಸೃಷ್ಟಿಸಲು ಎಎಪಿ ಪ್ರಯತ್ನಿಸಿದೆ: ಮೋದಿ

Video: ದೆಹಲಿ ಮತ್ತು ಹರಿಯಾಣ ನಡುವೆ ದ್ವೇಷ ಸೃಷ್ಟಿಸಲು ಎಎಪಿ ಪ್ರಯತ್ನಿಸಿದೆ: ಮೋದಿ

ನಯನಾ ರಾಜೀವ್
|

Updated on: Aug 17, 2025 | 3:11 PM

Share

ದೆಹಲಿಯ ಅಭಿವೃದ್ಧಿಯನ್ನು ನಿರ್ಲಕ್ಷಿಸಿದ್ದಕ್ಕಾಗಿ ಆಮ್ ಆದ್ಮಿ ಪಕ್ಷ (ಎಎಪಿ)ವನ್ನು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಪರೋಕ್ಷವಾಗಿ ಟೀಕಿಸಿದರು.ರಾಜಧಾನಿಯನ್ನು ಸಮೃದ್ಧಗೊಳಿಸಲು ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಕೈಲಾದಷ್ಟು ಪ್ರಯತ್ನಿಸುತ್ತದೆ ಎಂದು ಪ್ರತಿಪಾದಿಸಿದರು. ದ್ವಾರಕಾ ಎಕ್ಸ್‌ಪ್ರೆಸ್‌ವೇ ಮತ್ತು ನಗರ ವಿಸ್ತರಣಾ ರಸ್ತೆ-II ರ ದೆಹಲಿ ವಿಭಾಗವನ್ನು ಉದ್ಘಾಟಿಸಿ ಮಾತನಾಡಿದರು.

ನವದೆಹಲಿ, ಆಗಸ್ಟ್ 17: ದೆಹಲಿಯ ಅಭಿವೃದ್ಧಿಯನ್ನು ನಿರ್ಲಕ್ಷಿಸಿದ್ದಕ್ಕಾಗಿ ಆಮ್ ಆದ್ಮಿ ಪಕ್ಷ (ಎಎಪಿ)ವನ್ನು  ಪ್ರಧಾನಿ ನರೇಂದ್ರ ಮೋದಿ ಅವರು ಪರೋಕ್ಷವಾಗಿ ಟೀಕಿಸಿದರು. ರಾಜಧಾನಿಯನ್ನು ಸಮೃದ್ಧಗೊಳಿಸಲು ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಕೈಲಾದಷ್ಟು ಪ್ರಯತ್ನಿಸುತ್ತದೆ ಎಂದು ಪ್ರತಿಪಾದಿಸಿದರು. ದ್ವಾರಕಾ ಎಕ್ಸ್‌ಪ್ರೆಸ್‌ವೇ ಮತ್ತು  ಅರ್ಬನ್ ಎಕ್ಸ್​​ಟೆನ್ಷನ್ ರೋಡ್ -II ರ ದೆಹಲಿ ವಿಭಾಗವನ್ನು ಉದ್ಘಾಟಿಸಿ ಮಾತನಾಡಿದರು.

ದೆಹಲಿ, ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿ ಒಂದೇ ಸಮಯದಲ್ಲಿ ಬಿಜೆಪಿ ಮೊದಲ ಬಾರಿಗೆ ಅಧಿಕಾರದಲ್ಲಿದೆ ಎಂದರು.ಅರವಿಂದ್ ಕೇಜ್ರಿವಾಲ್ ಅವರ ಪಕ್ಷವು ದೆಹಲಿಯ ಜನರನ್ನು ಹರಿಯಾಣದ ವಿರುದ್ಧ ಪ್ರಚೋದಿಸಲು ಪ್ರಯತ್ನಿಸಿದೆ, ರಾಜಧಾನಿಗೆ ಹರಿಯುತ್ತಿರುವ ಯಮುನಾ ನದಿಯ ನೀರನ್ನು ‘ವಿಷ’ಗೊಳಿಸುತ್ತಿದೆ ಎಂದರು.

ದ್ವಾರಕಾ ಎಕ್ಸ್‌ಪ್ರೆಸ್‌ವೇಯ ದೆಹಲಿ ವಿಭಾಗ ಮತ್ತು ನಗರ ವಿಸ್ತರಣಾ ರಸ್ತೆ-II (UER-II) ಅನ್ನು 11,000 ಕೋಟಿ ರೂ.ಗಳಲ್ಲಿ ಅಭಿವೃದ್ಧಿಪಡಿಸಲಾಗಿದ್ದು, ಎನ್​​ಸಿಆರ್​​ನಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. ಈ ಹೊಸ ಯೋಜನೆಗಳು ಸಂಪೂರ್ಣವಾಗಿ ಕಾರ್ಯರೂಪಕ್ಕೆ ಬಂದರೆ ಸೋನಿಪತ್, ರೋಹ್ಟಕ್, ಬಹದ್ದೂರ್‌ಗಢ ಮತ್ತು ಗುರುಗ್ರಾಮ್‌ನಿಂದ ಐಜಿಐ ವಿಮಾನ ನಿಲ್ದಾಣಕ್ಕೆ ಪ್ರಯಾಣದ ಸಮಯವನ್ನು ಗಮನಾರ್ಹವಾಗಿ ಕಡಿಮೆ ಮಾಡುವ ನಿರೀಕ್ಷೆಯಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ