AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ

ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ

ಸುಷ್ಮಾ ಚಕ್ರೆ
|

Updated on:Dec 04, 2025 | 8:38 PM

Share

ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷರಿಗೆ ಖಾಸಗಿ ಭೋಜನ ಕೂಟವನ್ನು ಆಯೋಜಿಸಿದ್ದಾರೆ. ಇಂದು ಸಂಜೆ ನವದೆಹಲಿಗೆ ಆಗಮಿಸಿದ ಪುಟಿನ್, ಪ್ರಧಾನ ಮಂತ್ರಿಯವರ ಲೋಕ ಕಲ್ಯಾಣ್ ಮಾರ್ಗ್ ನಿವಾಸಕ್ಕೆ ಭೋಜನ ಕೂಟಕ್ಕೆ ತೆರಳಿದರು. ಇಂದು ಸಂಜೆ ಉಭಯ ನಾಯಕರ ನಡುವಿನ ಸಂಭಾಷಣೆಯು ಶುಕ್ರವಾರ ನಡೆಯಲಿರುವ 23ನೇ ಭಾರತ-ರಷ್ಯಾ ಶೃಂಗಸಭೆಯ ಮಾತುಕತೆಗೆ ನಾಂದಿ ಹಾಡುವ ನಿರೀಕ್ಷೆಯಿದೆ, ಇದು ಹಲವಾರು ಪ್ರಮುಖ ಒಪ್ಪಂದಗಳನ್ನು ರೂಪಿಸುವ ನಿರೀಕ್ಷೆಯಿದೆ.

ನವದೆಹಲಿ, ಡಿಸೆಂಬರ್ 4: ಎರಡು ದಿನಗಳ ಭೇಟಿಗಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Putin in India) ದೆಹಲಿಗೆ ಆಗಮಿಸಿದ್ದಾರೆ. 4 ವರ್ಷಗಳ ಬಳಿಕ ಅವರು ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಅಲ್ಲದೆ, ಅಮೆರಿಕದ ಜೊತೆಗಿನ ಭಾರತದ ಸಂಬಂಧ ಹಳಸಿರುವ ಹಿನ್ನೆಲೆಯಲ್ಲಿ ಈ ಭೇಟಿ ಜಾಗತಿಕವಾಗಿಯೂ ಬಹಳ ಮಹತ್ವ ಪಡೆದಿದೆ. ಇಂದು ಖುದ್ದಾಗಿ ದೆಹಲಿಯ ವಿಮಾನ ನಿಲ್ದಾಣಕ್ಕೆ ತೆರಳಿ ಪುಟಿನ್ ಅವರನ್ನು ಪ್ರಧಾನಿ ಮೋದಿ ಬರಮಾಡಿಕೊಂಡಿದ್ದಾರೆ. ಇದಾದ ಬಳಿಕ ಇಬ್ಬರೂ ಒಂದೇ ಕಾರಿನಲ್ಲಿ ಪ್ರಧಾನಮಂತ್ರಿಗಳ ಸರ್ಕಾರಿ ನಿವಾಸಕ್ಕೆ ತೆರಳಿದ್ದಾರೆ. ಪುಟಿನ್ ಅವರ ಸ್ವಾಗತಕ್ಕಾಗಿ ಪ್ರಧಾನಿಯ ಅಧಿಕೃತ ನಿವಾಸವನ್ನು ಬಹಳ ಸುಂದರವಾಗಿ ಅಲಂಕರಿಸಲಾಗಿತ್ತು. ಇಂದು ಇಲ್ಲಿ ಪ್ರಧಾನಿ ಮೋದಿ ತಮ್ಮ ಗೆಳೆಯ ಪುಟಿನ್​ಗಾಗಿ ವಿಶೇಷ ಭೋಜನಕೂಟವನ್ನು ಆಯೋಜಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Dec 04, 2025 08:35 PM