ನೀಟ್​ ಕೇಸ್ ಬಳಿಕ ಎಚ್ಚೆತ್ತ ಕೇಂದ್ರ: ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು?

Updated on: Jul 26, 2026 | 8:33 PM

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ತೀವ್ರ ಸ್ವರೂಪ ಪಡೆದಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವಂತಾಗಿದೆ. ಇದೊಂದು ಕೇಂದ್ರ ಸರ್ಕಾರಕ್ಕೆ ಒಂದು ಕಪ್ಪು ಚುಕ್ಕೆಯಾಗಿದೆ. ಈ ಪ್ರಕರಣ ಬೆನ್ನಲ್ಲೇ ಎಚ್ಚೆತ್ತ ಪ್ರಧಾನಿ ನರೇಂದ್ರ ಮೋದಿ ಮುಂದಿನ ದಿನಗಳಲ್ಲಿ ಈ ರೀತಿಯಾಗದಂತೆ ಬಹುದೊಡ್ಡ ತೀರ್ಮಾನ ಕೈಗೊಂಡಿದ್ದಾರೆ. ಹೌದು.....ಪರೀಕ್ಷಾ ಸುಧಾರಣೆಗಳಿಗಾಗಿ ಟಾಸ್ಕ್​​ ಫೋರ್ಸ್​​​ ರಚಿಸುವುದಾಗಿ ಖುದ್ದು ಮೋದಿಯೇ ಘೋಷಣೆ ಮಾಡಿದ್ದಾರೆ. ಈ ಸಂಬಂಧ ವಿಡಿಯೋ ಹೇಳಿಕೆ ಬಿಡುಗಡೆ ಪ್ರಧಾನಿ ಮೋದಿ, ಮಾಡಿರುವ ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆ ರಚಿಸುವುದಾಗಿ ಘೋಷಣೆ ಮಾಡಿದ್ದಾರೆ.

ನವದೆಹಲಿ, (ಜುಲೈ 26): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ತೀವ್ರ ಸ್ವರೂಪ ಪಡೆದಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವಂತಾಗಿದೆ. ಇದೊಂದು ಕೇಂದ್ರ ಸರ್ಕಾರಕ್ಕೆ ಒಂದು ಕಪ್ಪು ಚುಕ್ಕೆಯಾಗಿದೆ. ಈ ಪ್ರಕರಣ ಬೆನ್ನಲ್ಲೇ ಎಚ್ಚೆತ್ತ ಪ್ರಧಾನಿ ನರೇಂದ್ರ ಮೋದಿ ಮುಂದಿನ ದಿನಗಳಲ್ಲಿ ಈ ರೀತಿಯಾಗದಂತೆ ಬಹುದೊಡ್ಡ ತೀರ್ಮಾನ ಕೈಗೊಂಡಿದ್ದಾರೆ. ಹೌದು…..ಪರೀಕ್ಷಾ ಸುಧಾರಣೆಗಳಿಗಾಗಿ ಟಾಸ್ಕ್​​ ಫೋರ್ಸ್​​​ ರಚಿಸುವುದಾಗಿ ಖುದ್ದು ಮೋದಿಯೇ ಘೋಷಣೆ ಮಾಡಿದ್ದಾರೆ. ಈ ಸಂಬಂಧ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಪ್ರಧಾನಿ ಮೋದಿ, ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆ ರಚಿಸುವುದಾಗಿ ಘೋಷಣೆ ಮಾಡಿದ್ದಾರೆ.

“ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಭಾರತ ಸರ್ಕಾರ ನಿರಂತರವಾಗಿ ವಿವಿಧ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ನಾವು ಈಗಾಗಲೇ ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಿದ್ದೇವೆ. ಕಠಿಣ ಕಾನೂನು ನಿಬಂಧನೆಗಳನ್ನು ಒಳಗೊಂಡಿರುವ ಸಂಸತ್ತಿನಲ್ಲಿ ಹೊಸ ಶಾಸನವನ್ನು ಜಾರಿಗೆ ತರಲು ಮುಂದಾಗಿದ್ದೇವೆ. ಆದಾಗ್ಯೂ, ನಾವು ಭವಿಷ್ಯದತ್ತ ನೋಡಬೇಕು. ನಮ್ಮ ಪರೀಕ್ಷಾ ವ್ಯವಸ್ಥೆಯು ವಿಶ್ವಾಸಾರ್ಹ ಮತ್ತು ಪಾರದರ್ಶಕವಾಗಿರಬೇಕು ಮತ್ತು ಅದು ತಂತ್ರಜ್ಞಾನವನ್ನು ಗರಿಷ್ಠವಾಗಿ ಬಳಸಿಕೊಳ್ಳಬೇಕು. ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ತಂತ್ರಜ್ಞಾನ ತಜ್ಞ ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಉನ್ನತ ಕಾರ್ಯಪಡೆಯನ್ನು ರಚಿಸಲು ನಿರ್ಧರಿಸಿದ್ದೇವೆ. ಈ ಕಾರ್ಯಪಡೆ ಪರೀಕ್ಷಾ ಸುಧಾರಣೆಗಳ ಮೇಲೆ ಕೇಂದ್ರೀಕರಿಸುತ್ತದೆ ಮತ್ತು ಅದರ ವರದಿಯ ಆಧಾರದ ಮೇಲೆ, ಮುಂಬರುವ ಪರೀಕ್ಷೆಗಳ ವಿಶ್ವಾಸಾರ್ಹತೆಯನ್ನು ಆದಷ್ಟು ಬೇಗ ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪರೀಕ್ಷಾ ವ್ಯವಸ್ಥೆ ಸುಧಾರಿಸಲು ನಂದನ್ ನಿಲೇಕಣಿ ಅಧ್ಯಕ್ಷತೆಯಲ್ಲಿ ಟ್ಯಾಸ್ಕ್ ಫೋರ್ಸ್ ರಚನೆ

Published on: Jul 26, 2026 07:34 PM
Follow Us