ಭೂತಾನ್ಗೆ ತೆರಳಿದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ಪ್ರಧಾನಿ ನರೇಂದ್ರ ಮೋದಿ(Narendra Modi) ಇಂದು ದೆಹಲಿಯಿಂದ ಭೂತಾನ್ಗೆ ತೆರಳಿದ್ದಾರೆ. ಪಾರೋ ವಿಮಾನ ನಿಲ್ದಾಣದಲ್ಲಿ ಭೂತಾನ್ ಪ್ರಧಾನಿ ಶೆರಿಂಗ್ ಟೊಬ್ಗೆ ಮೋದಿಯನ್ನು ಆತ್ಮೀಯವಾಗಿ ಬರಮಾಡಿಕೊಂಡರು.ಅವರ ಸಂಪುಟದ ಸಚಿವರು ಕೂಡ ಅಲ್ಲಿದ್ದರು. ಥಿಂಪುವಿನಲ್ಲಿ ಭಾರತ ಸರ್ಕಾರದ ನೆರವಿನೊಂದಿಗೆ ನಿರ್ಮಿಸಲಾದ ಅತ್ಯಾಧುನಿಕ ಆಸ್ಪತ್ರೆಯಾದ ಜಿಯಾಲ್ಟ್ಸುನ್ ಜೆಟ್ಸನ್ ಪೆಮಾ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ.

ನಿನ್ನೆಯೇ ಮೋದಿ ಭೂತಾನ್ಗೆ ಭೇಟಿ ನೀಡಬೇಕಿತ್ತು ಆದರೆ ಪ್ರತಿಕೂ ಹವಾಮಾನದಿಂದಾಗಿ ಒಂದು ದಿನ ತಡವಾಗಿ ತೆರಳಿದ್ದಾರೆ. ಭೂತಾನ್ಗೆ ಭೇಟಿ ನೀಡುವ ಕುರಿತು ಪ್ರಧಾನಿ ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ, ಭಾರತ-ಭೂತಾನ್ ಸಹಭಾಗಿತ್ವವನ್ನು ಮತ್ತಷ್ಟು ಗಟ್ಟಿಗೊಳಿಸುವ ಉದ್ದೇಶದಿಂದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ. 2019ರಲ್ಲಿ ಕೊನೆಯ ಬಾರಿ ಅವರು ಭೂತಾನ್ಗೆ ಭೇಟಿ ನೀಡಿದ್ದರು.
ತಮ್ಮ ಎರಡು ದಿನಗಳ ಭೇಟಿಯಲ್ಲಿ ಪ್ರಧಾನಿಯವರು ಭೂತಾನ್ ದೊರೆ ಜಿಗ್ಮೆ ಖೇಸರ್ ನಮ್ಗ್ಯೆಲ್ ವಾಂಗ್‌ಚುಕ್, ಮಾಜಿ ದೊರೆ ಜಿಗ್ಮೆ ಸಿಂಗ್ಯೆ ವಾಂಗ್‌ಚುಕ್ ಅವರನ್ನು ಭೇಟಿಯಾಗಲಿದ್ದಾರೆ. ದ್ವಿಪಕ್ಷೀಯ ಮತ್ತು ಪ್ರಾದೇಶಿಕ ವಿಷಯಗಳ ಕುರಿತು ಭೂತಾನ್ ಪ್ರಧಾನಿ ತ್ಶೆರಿಂಗ್ ತೊಬ್ಗೇ ಅವರೊಂದಿಗೆ ಮೋದಿ ಚರ್ಚೆ ನಡೆಸಲಿದ್ದಾರೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ