ಸಚಿವ ಪಿಯೂಶ್​ ಗೋಯಲ್​ ಮನೆಯಲ್ಲಿ ನಡೆದ ಗಣೇಶ ಪೂಜೆಯಲ್ಲಿ ಪ್ರಧಾನಿ ಮೋದಿ ಭಾಗಿ: ವಿಡಿಯೋ ನೋಡಿ

Updated on: Sep 14, 2026 | 11:04 PM

ಗೌರಿಗಣೇಶ ಹಬ್ಬದ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ನಿವಾಸಕ್ಕೆ ಭೇಟಿ ನೀಡಿ ಗಣೇಶ ಪೂಜೆಯಲ್ಲಿ ಭಾಗಿಯಾದರು. ಈ ಕುರಿತಾಗಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ತಮ್ಮ ಎಕ್ಸ್​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ನವದೆಹಲಿ, ಸೆಪ್ಟೆಂಬರ್​ 14: ದೇಶಾದ್ಯಂತ ಇಂದು ಅದ್ಧೂರಿಯಾಗಿ ಗಣೇಶ ಉತ್ಸವ ಆಚರಿಸಲಾಗಿದೆ. ಈ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಸಚಿವ ಪಿಯೂಷ್ ಗೋಯಲ್​​ ಅವರ ದೆಹಲಿಯಲ್ಲಿರು ನಿವಾಸಕ್ಕೆ ಭೇಟಿ ನೀಡಿ ಗಣೇಶ ಪೂಜೆಯಲ್ಲಿ ಭಾಗಿ ಆದರು. ಸ್ವತಃ ನರೇಂದ್ರ ಮೋದಿ ಅವರು ಅವರು ಆರತಿ ಮಾಡುವ ಮೂಲಕ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿದರು. ಇನ್ನು ಬೆಳಿಗ್ಗೆ ದೇಶದ ಜನತೆಗೆ ಗಣೇಶ ಹಬ್ಬದ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ, ‘ಗಣೇಶನ ದರ್ಶನ, ಪೂಜೆಯಿಂದ ಜನರ ಬದುಕಿನಲ್ಲಿ ಹೊಸ ಶಕ್ತಿ, ಹೊಸ ಉತ್ಸಾಹ ಮೂಡಲಿ. ಗಣಪತಿಯ ದಿವ್ಯ ಆಶೀರ್ವಾದದಿಂದ ಎಲ್ಲರ ಕಾರ್ಯಗಳು ಯಶಸ್ವಿಯಾಗಲಿ’ ಎಂದ ಶುಭಹಾರೈಸಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More